Nellikai saaru recipe in Kannada |ನೆಲ್ಲಿಕಾಯಿ ಸಾರು ಮಾಡುವ ವಿಧಾನ
ನೆಲ್ಲಿಕಾಯಿ ಸಾರು ವಿಡಿಯೋ
ಬೇಕಾಗುವ ಪದಾರ್ಥಗಳು: (ಅಳತೆ ಕಪ್ = 240 ಎಂ ಎಲ್)
- 2 ನೆಲ್ಲಿಕಾಯಿ
- 2 ಟೀಸ್ಪೂನ್ ತೊಗರಿಬೇಳೆ
- 1 ಟೀಸ್ಪೂನ್ ಉದ್ದಿನಬೇಳೆ
- 2 ಟೀಸ್ಪೂನ್ ಕೊತ್ತಂಬರಿ ಬೀಜ ಅಥವಾ ಧನಿಯಾ
- 1/2 ಟೀಸ್ಪೂನ್ ಜೀರಿಗೆ
- ಸ್ವಲ್ಪ ಕರಿಮೆಣಸು
- ಚಿಟಿಕೆ ಮೆಂತ್ಯ
- ಚಿಟಿಕೆ ಸಾಸಿವೆ
- 2 - 4 ಹಸಿಮೆಣಸಿನಕಾಯಿ
- 5 - 6 ಕರಿಬೇವಿನ ಎಲೆ
- 1/4 ಕಪ್ ತೆಂಗಿನ ತುರಿ
- 1.5 ಟೀಸ್ಪೂನ್ ಉಪ್ಪು (ಅಥವಾ ನಿಮ್ಮ ರುಚಿಗೆ ತಕ್ಕಷ್ಟು)
- 1/4 ಟೀಸ್ಪೂನ್ ಅರಿಶಿನ
- 1 ಟೇಬಲ್ ಚಮಚ ಹೆಚ್ಚಿದ ಕೊತ್ತಂಬರಿ ಸೊಪ್ಪು
- 1 ಟೀಸ್ಪೂನ್ ಅಡುಗೆ ಎಣ್ಣೆ
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
- 1/2 ಚಮಚ ಸಾಸಿವೆ
- 1 ಒಣಮೆಣಸಿನಕಾಯಿ
- ದೊಡ್ಡ ಚಿಟಿಕೆ ಇಂಗು
- 5 - 6 ಕರಿಬೇವಿನ ಎಲೆ
- 1 ಟೇಬಲ್ ಚಮಚ ಎಣ್ಣೆ
ನೆಲ್ಲಿಕಾಯಿ ಸಾರು ಮಾಡುವ ವಿಧಾನ:
- ನೆಲ್ಲಿಕಾಯಿಯನ್ನು ತೊಳೆದು ಕತ್ತರಿಸಿ ಬೀಜ ತೆಗೆಯಿರಿ.
- ಒಂದು ಬಾಣಲೆಯಲ್ಲಿ ತೊಗರಿಬೇಳೆ, ಉದ್ದಿನಬೇಳೆ, ಕೊತ್ತಂಬರಿ ಬೀಜ, ಜೀರಿಗೆ, ಕರಿಮೆಣಸು ಮೆಂತ್ಯ ಮತ್ತು ಸಾಸಿವೆಯನ್ನು ಒಂದು ಚಮಚ ಎಣ್ಣೆಯಲ್ಲಿ ಹುರಿಯಿರಿ.
- ಬೇಳೆಗಳು ಕಂದು ಬಣ್ಣ ಬಂದು, ಸುವಾಸನೆ ಬಂದ ಮೇಲೆ ಕತ್ತರಿಸಿದ ಹಸಿಮೆಣಸಿನಕಾಯಿ ಮತ್ತು ಕರಿಬೇವು ಹಾಕಿ ಹುರಿಯಿರಿ. ಸ್ಟವ್ ಆಫ್ ಮಾಡಿ.
- ಮಿಕ್ಸಿ ಜಾರಿನಲ್ಲಿ ಕತ್ತರಿಸಿದ ನೆಲ್ಲಿಕಾಯಿ, ತೆಂಗಿನತುರಿ ಮತ್ತು ಹುರಿದ ಪದಾರ್ಥಗಳನ್ನು ಅಗತ್ಯವಿದ್ದಷ್ಟು ನೀರು ಸೇರಿಸಿ ಅರೆಯಿರಿ.
- ಅದನ್ನು ಒಂದು ಪಾತ್ರೆಗೆ ಹಾಕಿ, ಅಗತ್ಯವಿದ್ದಷ್ಟು ನೀರು ಸೇರಿಸಿ (ಸುಮಾರು ಅರ್ಧ ಲೀಟರ್)
- ಉಪ್ಪು ಮತ್ತು ಅರಿಶಿನ ಸೇರಿಸಿ ಕುದಿಸಿ.
- ಚೆನ್ನಾಗಿ ಕುದಿಸಿ, ಕೊತ್ತಂಬರಿ ಸೊಪ್ಪು ಸೇರಿಸಿ, ಸ್ಟವ್ ಆಫ್ ಮಾಡಿ.
- ಆಮೇಲೆ ಎಣ್ಣೆ, ಸಾಸಿವೆ, ಒಣಮೆಣಸು, ಇಂಗು ಮತ್ತು ಕರಿಬೇವಿನ ಒಗ್ಗರಣೆ ಮಾಡಿ.
- ಬಿಸಿಯಾದ ಅನ್ನದೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ