New tasty chutney recipe Kannada | ಹೊಸ ರೀತಿಯ ಚಟ್ನಿ ಮಾಡುವ ವಿಧಾನ
ಹೊಸ ರೀತಿಯ ಚಟ್ನಿ ವಿಡಿಯೋ
ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್ )
- 1 - 2 ಒಣಮೆಣಸಿನಕಾಯಿ
- 2 ಟೀಸ್ಪೂನ್ ಉದ್ದಿನಬೇಳೆ
- 3 - 4 ಎಸಳು ಬೆಳ್ಳುಳ್ಳಿ (ಅಥವಾ ಚಿಟಿಕೆ ಇಂಗು)
- 1 ಸಣ್ಣ ಗಾತ್ರದ ಈರುಳ್ಳಿ
- ಸ್ವಲ್ಪ ಕರಿಬೇವು
- 1 ಸಣ್ಣ ಗಾತ್ರದ ಟೊಮೇಟೊ
- 2 ಟೇಬಲ್ ಚಮಚ ತೆಂಗಿನತುರಿ
- 4 ಟೇಬಲ್ ಚಮಚ ಹುರಿಗಡಲೆ ಅಥವಾ ಕಡ್ಲೆ ಪಪ್ಪು
- ಉಪ್ಪು ರುಚಿಗೆ ತಕ್ಕಷ್ಟು
- 1 ಟೀಸ್ಪೂನ್ ಎಣ್ಣೆ
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
- 1 ಟೀಸ್ಪೂನ್ ಎಣ್ಣೆ
- ಅರ್ಧ ಒಣಮೆಣಸಿನಕಾಯಿ
- 4 ಕರಿಬೇವಿನ ಎಲೆ
- 1/2 ಟಿಸ್ಪೂನ್ ಸಾಸಿವೆ
ಹೊಸ ರೀತಿಯ ಚಟ್ನಿ ಮಾಡುವ ವಿಧಾನ:
- ಒಂದು ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ. ಒಣಮೆಣಸಿನಕಾಯಿ ಮತ್ತು ಉದ್ದಿನಬೇಳೆ ಹಾಕಿ ಹುರಿಯಿರಿ.
- ನಂತರ ಬೆಳ್ಳುಳ್ಳಿ ಮತ್ತು ಈರುಳ್ಳಿ ಹಾಕಿ, ಈರುಳ್ಳಿ ಮೆತ್ತಗಾಗುವವರೆಗೆ ಹುರಿಯಿರಿ.
- ಕರಿಬೇವು ಮತ್ತು ಟೊಮೇಟೊ ಸೇರಿಸಿ, ಟೊಮೇಟೊ ಮೆತ್ತಗಾಗುವವರೆಗೆ ಹುರಿಯಿರಿ.
- ಕೊನೆಯಲ್ಲಿ ತೆಂಗಿನತುರಿ ಮತ್ತು ಹುರಿಗಡಲೆ ಸೇರಿಸಿ, ಒಮ್ಮೆ ಹುರಿದು, ಸ್ಟವ್ ಆಫ್ ಮಾಡಿ.
- ಬಿಸಿ ಆರಿದ ಮೇಲೆ ಮಿಕ್ಸಿ ಜಾರಿನಲ್ಲಿ ತೆಗೆದುಕೊಳ್ಳಿ.
- ರುಚಿಗೆ ತಕ್ಕಂತೆ ಉಪ್ಪು ಮತ್ತು ಅಗತ್ಯವಿದ್ದಷ್ಟು ನೀರು ಸೇರಿಸಿ ನುಣ್ಣನೆ ಅರೆಯಿರಿ.
- ಒಂದು ಬಟ್ಟಲಿಗೆ ತೆಗೆಯಿರಿ.
- ಸಾಸಿವೆ, ಕರಿಬೇವು ಮತ್ತು ಒಣಮೆಣಸಿನಕಾಯಿಯ ಒಗ್ಗರಣೆ ಕೊಡಿ.
- ದೋಸೆ ಅಥವಾ ಇಡ್ಲಿಯೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ