Rave poori recipe in Kannada | ರವೆ ಪೂರಿ ಮಾಡುವ ವಿಧಾನ
ರವೆ ಪೂರಿ ವಿಡಿಯೋ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 2 ಕಪ್ ಚಿರೋಟಿ ರವೆ ಅಥವಾ ಸಣ್ಣ ರವೆ
- 1 ಚಮಚ ಬಿಸಿ ತುಪ್ಪ ಅಥವಾ ಎಣ್ಣೆ
- ಉಪ್ಪು ರುಚಿಗೆ ತಕ್ಕಷ್ಟು
- ಸುಮಾರು 3/4 ಕಪ್ ನೀರು
- ಎಣ್ಣೆ ಪೂರಿ ಕಾಯಿಸಲು
ರವೆ ಪೂರಿ ಮಾಡುವ ವಿಧಾನ:
- ಒಂದು ಅಗಲವಾದ ಬಟ್ಟಲಿಗೆ ರವೆ ಮತ್ತು ಉಪ್ಪು ಹಾಕಿ.
- ಒಂದು ಚಮಚ ಎಣ್ಣೆ ಸೇರಿಸಿ, ಚೆನ್ನಾಗಿ ಕಲಸಿ.
- ಸ್ವಲ್ಪ ಸ್ವಲ್ಪವೇ ನೀರು ಸೇರಿಸುತ್ತಾ ಪೂರಿ ಹಿಟ್ಟನ್ನು ತಯಾರಿಸಿ. ಸುಮಾರು 3/4 ಕಪ್ ನೀರು ಬೇಕಾಗುವುದು.
- ಹದಿನೈದು ನಿಮಿಷ ನೆನೆಯಲು ಬಿಡಿ.
- ನೆಲ್ಲಿಕಾಯಿ ಗಾತ್ರದ ಉಂಡೆಗಳನ್ನು ಮಾಡಿಕೊಳ್ಳಿ.
- ಸ್ವಲ್ಪ ಹಿಟ್ಟು ಉದುರಿಸಿ ಅಂಗೈ ಅಗಲದ ಪೂರಿ ಲಟ್ಟಿಸಿ. ಪೂರಿ ಚಪಾತಿಯಷ್ಟು ತೆಳುವಾಗಿರಲಿ.
- ಎಣ್ಣೆ ಕಾಯಿಸಿ ಒಂದೊಂದಾಗಿ ಲಟ್ಟಿಸಿದ ಪೂರಿಗಳನ್ನು ಕಾಯಿಸಿ. ಕಾಯಿಸುವಾಗ ಒಂದೋ ಸೌಟಿನ ಹಿಂಭಾಗದಿಂದ ಮೆಲ್ಲನೆ ಒತ್ತುವುದು, ಇಲ್ಲವೇ ಎಣ್ಣೆ ಹಾರಿಸುವುದು ಮಾಡಿದಲ್ಲಿ ಪೂರಿ ಚೆನ್ನಾಗಿ ಉಬ್ಬುವುದು.
- ಎರಡು ಬದಿ ಕಾಯಿಸಿ. ಗೊಜ್ಜು, ಖಾರ ಚಟ್ನಿ ಅಥವಾ ಆಲೂ ಭಾಜಿಯೊಂದಿಗೆ ಬಡಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ