Oggarane dose recipe in Kannada | ಒಗ್ಗರಣೆ ದೋಸೆ ಮಾಡುವ ವಿಧಾನ
ಒಗ್ಗರಣೆ ದೋಸೆ ವಿಡಿಯೋ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1 ಕಪ್ ಅಕ್ಕಿ (ದೋಸೆ ಅಕ್ಕಿ ಆಥವಾ ಸೋನಾ ಮಸೂರಿ)
- 1/2 ಕಪ್ ತೆಂಗಿನ ತುರಿ
- 1/4 ಕಪ್ ಅವಲಕ್ಕಿ
- 4 - 5 ಒಣಮೆಣಸಿನಕಾಯಿ
- 1 ಟೀಸ್ಪೂನ್ ಕೊತ್ತಂಬರಿ ಬೀಜ
- 1/2 ಟೀಸ್ಪೂನ್ ಜೀರಿಗೆ
- ಸಣ್ಣ ನೆಲ್ಲಿಕಾಯಿ ಗಾತ್ರದ ಹುಣಸೆ ಹಣ್ಣು
- 1 ಟೀಸ್ಪೂನ್ ಬೆಲ್ಲ
- ಉಪ್ಪು ರುಚಿಗೆ ತಕ್ಕಷ್ಟು
ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:
- ಸಾಸಿವೆ
- ಉದ್ದಿನಬೇಳೆ
- ಸಣ್ಣಗೆ ಹೆಚ್ಚಿದ ಈರುಳ್ಳಿ
- ಸಣ್ಣಗೆ ಹೆಚ್ಚಿದ ಕರಿಬೇವು
- ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪು
- ಒಗ್ಗರಣೆ ಮಾಡಲು ಎಣ್ಣೆ
ಒಗ್ಗರಣೆ ದೋಸೆ ಮಾಡುವ ವಿಧಾನ:
- ಅಕ್ಕಿಯನ್ನು ತೊಳೆದು 3 - 4 ಘಂಟೆಗಳ ಕಾಲ ನೀರಿನಲ್ಲಿ ನೆನೆಸಿ.
- ಅವಲಕ್ಕಿಯನ್ನು ಹತ್ತು ನಿಮಿಷ ನೆನೆಸಿ.
- ನಂತರ ನೀರನ್ನು ಬಗ್ಗಿಸಿ, ಅಕ್ಕಿ ಮತ್ತು ಅವಲಕ್ಕಿಯನ್ನು ಮಿಕ್ಸಿಜಾರಿನಲ್ಲಿ ತೆಗೆದುಕೊಳ್ಳಿ.
- ತೆಂಗಿನ ತುರಿ, ಕೊತ್ತಂಬರಿ, ಜೀರಿಗೆ ಮತ್ತು ಒಣ ಮೆಣಸಿನಕಾಯಿಯನ್ನು ಸೇರಿಸಿ.
- ಅಗತ್ಯವಿದ್ದಷ್ಟು ನೀರು ಹಾಕಿ ಮಿಕ್ಸರ್ ಗ್ರೈಂಡರ್ ನಲ್ಲಿ ನಯವಾಗಿ ಅರೆಯಿರಿ.
- ಒಂದು ಪಾತ್ರೆಗೆ ಹಿಟ್ಟನ್ನು ಬಗ್ಗಿಸಿ. ರುಚಿಗೆ ತಕ್ಕಂತೆ ಉಪ್ಪು, ಹುಳಿ ಮತ್ತು ಬೆಲ್ಲ ಸೇರಿಸಿ.
- ಅಗತ್ಯವಿದ್ದಷ್ಟು ನೀರು ಸೇರಿಸಿ ಕಲಸಿ. ಹಿಟ್ಟು ನೀರ್ ದೋಸೆಗಿಂತ ಸ್ವಲ್ಪ ದಪ್ಪ ಇರಲಿ.
- ಕಬ್ಬಿಣದ ಕಾವಲಿ ಅಥವಾ ನಾನ್ ಸ್ಟಿಕ್ ಪ್ಯಾನ್ ತೆಗೆದುಕೊಂಡು ಬಿಸಿ ಮಾಡಿ.
- ಎಣ್ಣೆ, ಸಾಸಿವೆ, ಉದ್ದಿನಬೇಳೆ, ಕರಿಬೇವು, ಈರುಳ್ಳಿ ಮತ್ತು ಕೊತ್ತಂಬರಿ ಸೊಪ್ಪಿನ ಒಗ್ಗರಣೆ ಮಾಡಿ.
- ಒಗ್ಗರಣೆಯನ್ನು ಹರಡಿ, ಮೇಲೆ ದೋಸೆ ಹಿಟ್ಟನ್ನು ಸೌಟಿನಿಂದ ಸುರಿಯಿರಿ.
- ಸುಮಾರು 10 ಸೆಕೆಂಡುಗಳ ಕಾಲ ಮುಚ್ಚಳವನ್ನು ಮುಚ್ಚಿ ಬೇಯಿಸಿ.
- ನಂತರ ಮುಚ್ಚಳ ತೆರೆದು, ದೋಸೆ ತಿರುಗಿಸಿ ಹಾಕಿ ಇನ್ನೊಂದು ಬದಿ ಕಾಯಿಸಿ.
- ದೋಸೆಯನ್ನು ಹಾಗೆ ತಿನ್ನಬಹುದು. ಚಟ್ನಿ ಜೊತೆ ಬೇಕಾದರೂ ಬಡಿಸಬಹುದು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ