Masala kaju recipe in Kannada | ಮಸಾಲೆ ಗೋಡಂಬಿ ಮಾಡುವ ವಿಧಾನ
ಮಸಾಲೆ ಗೋಡಂಬಿ ವಿಡಿಯೋ
ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )
- 1 ಕಪ್ ಗೋಡಂಬಿ
- 1/2 ಟೀಸ್ಪೂನ್ ಅಚ್ಚಖಾರದ ಪುಡಿ (ನಿಮ್ಮ ರುಚಿಗೆ ತಕ್ಕಂತೆ ಹೊಂದಿಸಿ)
- 1/4 ಟೀಸ್ಪೂನ್ ಕರಿಮೆಣಸಿನಪುಡಿ
- 1/4 ಟೀಸ್ಪೂನ್ ಜೀರಿಗೆ ಪುಡಿ
- 1/4 ಟೀಸ್ಪೂನ್ ಗರಂ ಮಸಾಲಾ
- ದೊಡ್ಡ ಚಿಟಿಕೆ ಮಾವಿನಕಾಯಿ ಪುಡಿ
- ದೊಡ್ಡ ಚಿಟಿಕೆ ಇಂಗು
- 2 ಟೀಸ್ಪೂನ್ ತುಪ್ಪ
- ಉಪ್ಪು ರುಚಿಗೆ ತಕ್ಕಷ್ಟು
ಮಸಾಲೆ ಗೋಡಂಬಿ ಮಾಡುವ ವಿಧಾನ:
- ಒಂದು ಬಟ್ಟಲಿನಲ್ಲಿ ಕರಿಮೆಣಸಿನಪುಡಿ, ಜೀರಿಗೆ ಪುಡಿ, ಗರಂ ಮಸಾಲಾ, ಮಾವಿನಕಾಯಿ ಪುಡಿ, ಇಂಗು ಮತ್ತು ಉಪ್ಪನ್ನು ತೆಗೆದುಕೊಳ್ಳಿ. ಕಲಸಿ ಪಕ್ಕಕ್ಕಿಡಿ.
- ಒಂದು ಬಾಣಲೆಯಲ್ಲಿ ತುಪ್ಪ ಬಿಸಿ ಮಾಡಿ.
- ಮಧ್ಯಮ ಉರಿಯಲ್ಲಿ ಗೋಡಂಬಿಯನ್ನು ಹೊಂಬಣ್ಣ ಬರುವವರೆಗೆ ಹುರಿಯಿರಿ.
- ಅಚ್ಚಖಾರದ ಪುಡಿ ಸೇರಿಸಿ, ಒಮ್ಮೆ ಕಲಸಿ.
- ಕಲಸಿಟ್ಟ ಮಸಾಲೆ ಪುಡಿಗಳನ್ನು ಸೇರಿಸಿ, ಒಮ್ಮೆ ಮಗುಚಿ ಸ್ಟವ್ ಆಫ್ ಮಾಡಿ.
- ಗಾಳಿಯಾಡದ ಡಬ್ಬದಲ್ಲಿ ಹಾಕಿ ಎತ್ತಿಡಿ. ಸಂಜೆ ಚಹಾ ಅಥವಾ ಕಾಫಿಯೊಂದಿಗೆ ಸವಿದು ಆನಂದಿಸಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ