ಸಾರು-ಸಾಂಬಾರ್ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಸಾರು-ಸಾಂಬಾರ್ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಬುಧವಾರ, ಜೂನ್ 25, 2025

Bendekayi sambar recipe in Kannada | ಬೆಂಡೆಕಾಯಿ ಹುಳಿ ಮಾಡುವ ವಿಧಾನ

 

Bendekayi huli or sambar recipe Kannada

Bendekayi huli or sambar recipe in Kannada | ಬೆಂಡೆಕಾಯಿ ಹುಳಿ ಅಥವಾ ಸಾಂಬಾರ್ ಮಾಡುವ ವಿಧಾನ

ಬೆಂಡೆಕಾಯಿ ಹುಳಿ ಅಥವಾ ಸಾಂಬಾರ್ ವಿಡಿಯೋ

ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್ )

  1. 1/4 kg ಬೆಂಡೆಕಾಯಿ
  2. 1/4 ಕಪ್ ತೊಗರಿಬೇಳೆ
  3. ದೊಡ್ಡ ಚಿಟಿಕೆ ಅರಿಶಿನ ಪುಡಿ
  4. 2 ಟೀಸ್ಪೂನ್ ಕಲ್ಲುಪ್ಪು (ಅಥವಾ ನಿಮ್ಮ ರುಚಿ ಪ್ರಕಾರ)
  5. 1 ಟೀಸ್ಪೂನ್ ಬೆಲ್ಲ
  6. ನೆಲ್ಲಿಕಾಯಿ ಗಾತ್ರದ ಹುಣಿಸೇಹಣ್ಣು

ಮಸಾಲೆಗೆ ಬೇಕಾಗುವ ಪದಾರ್ಥಗಳು:

  1. 1/2 ಕಪ್ ತೆಂಗಿನ ತುರಿ
  2. 4 - 5 ಒಣ ಮೆಣಸಿನಕಾಯಿ
  3. 1 ಟೀಸ್ಪೂನ್ ಉದ್ದಿನ ಬೇಳೆ
  4. 2 ಟೀಸ್ಪೂನ್ ಕೊತ್ತಂಬರಿ ಬೀಜ
  5. 1/2 ಟೀಸ್ಪೂನ್ ಜೀರಿಗೆ
  6. 7 - 8 ಮೆಂತ್ಯ ಕಾಳು
  7. 1/2 ಟೀಸ್ಪೂನ್ ಅಡುಗೆ ಎಣ್ಣೆ

ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:

  1. 1 ಕೆಂಪು ಮೆಣಸಿನಕಾಯಿ
  2. 5 - 6 ಕರಿಬೇವು
  3. 1/2 ಟೀಸ್ಪೂನ್ ಸಾಸಿವೆ
  4. ದೊಡ್ಡ ಚಿಟಿಕೆ ಇಂಗು
  5. 1 ಟೀಸ್ಪೂನ್ ಅಡುಗೆ ಎಣ್ಣೆ

ಬೆಂಡೆಕಾಯಿ ಹುಳಿ ಅಥವಾ ಸಾಂಬಾರ್ ಮಾಡುವ ವಿಧಾನ:

  1. ತೊಗರಿಬೇಳೆಯನ್ನು ಒಂದು ಕುಕ್ಕರ್ ನಲ್ಲಿ ತೆಗೆದುಕೊಂಡು ತೊಳೆಯಿರಿ. 
  2. ನೀರು, ಅರಿಶಿನ, ನಾಲ್ಕೈದು ಹನಿ ಎಣ್ಣೆ ಹಾಕಿ ಬೇಳೆ ಮೆತ್ತಗಾಗುವವರೆಗೆ ಬೇಯಿಸಿ. 
  3. ಬೆಂಡೆಕಾಯಿಯನ್ನು ಕತ್ತರಿಸಿ.
  4. ಬಾಣಲೆಯಲ್ಲಿ ಬೆಂಡೆಕಾಯಿಯನ್ನು ಒಂದು ಚಮಚ ಎಣ್ಣೆ ಹಾಕಿ ಎರಡು ನಿಮಿಷ ಹುರಿಯಿರಿ. 
  5. ಅದನ್ನು ಬೇಯಿಸಿದ ಬೇಳೆಗೆ ಹಾಕಿ.
  6. ಹುಣಿಸೆಹಣ್ಣಿನ ರಸ ಹಾಕಿ. 
  7. ರುಚಿಗೆ ತಕ್ಕಂತೆ ಉಪ್ಪು ಹಾಕಿ. 
  8. ಅಗತ್ಯವಿದ್ದಷ್ಟು ನೀರು ಹಾಕಿ ಬೇಯಲು ಇಡಿ. 
  9. ಆ ಸಮಯದಲ್ಲಿ ಒಂದು ಬಾಣಲೆ ತೆಗೆದು ಕೊಂಡು, ಕೆಂಪು ಮೆಣಸಿನಕಾಯಿ, ಉದ್ದಿನಬೇಳೆ, ಕೊತ್ತಂಬರಿ ಬೀಜ, ಜೀರಿಗೆ ಮತ್ತು ಮೆಂತೆಯನ್ನು 1/2 ಟೀಸ್ಪೂನ್ ಎಣ್ಣೆ ಹಾಕಿ ಸಣ್ಣ ಉರಿಯಲ್ಲಿ ಬೇಳೆಗಳು ಕಂದು ಬಣ್ಣಕ್ಕೆ ಬರುವರೆಗೆ ಹುರಿಯಿರಿ. 
  10. ಸ್ಟವ್ ಆಫ್  ಮಾಡಿ.
  11. ಹುರಿದ ಮಸಾಲೆ ಮತ್ತು ತೆಂಗಿನತುರಿಯನ್ನು ಅಗತ್ಯವಿದ್ದಷ್ಟು ನೀರು ಸೇರಿಸಿ ಅರೆಯಿರಿ. 
  12. ಅರೆದ ಮಸಾಲೆಯನ್ನು ತರಕಾರಿ ಮತ್ತು ಬೇಳೆ ಇರುವ ಕುಕ್ಕರ್ ಗೆ ಹಾಕಿ. 
  13. ಬೆಲ್ಲ ಮತ್ತು ರುಚಿಗೆ ತಕ್ಕಂತೆ ಉಪ್ಪು ಸೇರಿಸಿ.
  14. ಅಗತ್ಯವಿದ್ದಷ್ಟು ನೀರು ಸೇರಿಸಿ, ಮಗುಚಿ, ಒಂದು ಕುದಿ ಕುದಿಸಿ. ಸ್ಟವ್ ಆಫ್ ಮಾಡಿ. 
  15. ಒಣ ಮೆಣಸು, ಸಾಸಿವೆ, ಇಂಗು ಮತ್ತು ಕರಿಬೇವಿನ ಒಗ್ಗರಣೆ ಕೊಡಿ. ಬಿಸಿ ಅನ್ನದೊಂದಿಗೆ ಬಡಿಸಿ.

ಶುಕ್ರವಾರ, ಸೆಪ್ಟೆಂಬರ್ 20, 2024

Heerekai maskai recipe in kannada | ಹೀರೆಕಾಯಿ ಮಸ್ಕಾಯಿ ಮಾಡುವ ವಿಧಾನ

 

Heerekai maskai recipe in kannada

Heerekai maskai recipe in kannada | ಹೀರೆಕಾಯಿ ಮಸ್ಕಾಯಿ ಮಾಡುವ ವಿಧಾನ

ಮಸ್ಕಾಯಿ  ವಿಡಿಯೋ

ಬೇಕಾಗುವ ಪದಾರ್ಥಗಳು: (ಅಳತೆ ಕಪ್ = 120 ಎಂ ಎಲ್)

  1. 1 ಹೀರೆಕಾಯಿ
  2. 1/2 ಕಪ್ ತೊಗರಿ ಬೇಳೆ 
  3. 1  ಈರುಳ್ಳಿ
  4. 1 ಟೊಮೇಟೊ 
  5. 4 - 5 ಎಸಳು ಬೆಳ್ಳುಳ್ಳಿ
  6. 2 ಟೇಬಲ್ ಸ್ಪೂನ್ ತೆಂಗಿನತುರಿ
  7. 1/4 ಟೀಸ್ಪೂನ್ ಅರಶಿನ ಪುಡಿ 
  8. 2 - 4 ಹಸಿರು ಮೆಣಸಿನಕಾಯಿ 
  9. 1 ಟೀಸ್ಪೂನ್ ಜೀರಿಗೆ
  10. ಸ್ವಲ್ಪ ಕೊತ್ತಂಬರಿ ಸೊಪ್ಪು 
  11. ಉಪ್ಪು ರುಚಿಗೆ ತಕ್ಕಷ್ಟು

ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:

  1. 1 ಒಣ ಮೆಣಸಿನಕಾಯಿ
  2. 1/2 ಟೀಸ್ಪೂನ್ ಸಾಸಿವೆ
  3. 4 -5 ಎಸಳು ಕತ್ತರಿಸಿದ ಬೆಳ್ಳುಳ್ಳಿ 
  4. 1 ಈರುಳ್ಳಿ
  5. 4 - 5 ಕರಿಬೇವಿನ ಎಲೆ 
  6. 2 ಟೀಸ್ಪೂನ್ ಅಡುಗೆ ಎಣ್ಣೆ

ಹೀರೆಕಾಯಿ ಮಸ್ಕಾಯಿ ಮಾಡುವ ವಿಧಾನ:

  1. ತೊಗರಿಬೇಳೆಯನ್ನು ತೊಳೆದು 30 ನಿಮಿಷ ನೆನೆಸಿ ಕುಕ್ಕರ್ ನಲ್ಲಿ ತೆಗೆದುಕೊಳ್ಳಿ. 
  2. ಅದಕ್ಕೆ ಕತ್ತರಿಸಿದ ಹೀರೆಕಾಯಿ, ಈರುಳ್ಳಿ, ಟೊಮೇಟೊ, ಹಸಿಮೆಣಸಿನಕಾಯಿ ಮತ್ತು ಬೆಳ್ಳುಳ್ಳಿ ಸೇರಿಸಿ
  3. ತೆಂಗಿನತುರಿ, ಕೊತ್ತಂಬರಿ ಸೊಪ್ಪು ಮತ್ತು ಜೀರಿಗೆಯನ್ನು ಸೇರಿಸಿ.
  4. ಜೊತೆಗೆ ಅರಿಶಿನ ಮತ್ತು ಉಪ್ಪನ್ನು ಸೇರಿಸಿ.
  5.  ಸುಮಾರು ಒಂದು ಕಪ್ ನೀರು ಸೇರಿಸಿ, ಮುಚ್ಚಳವನ್ನು ಮುಚ್ಚಿ ಎರಡು ವಿಷಲ್ ಮಾಡಿ ಮೆತ್ತಗೆ ಬೇಯಿಸಿಕೊಳ್ಳಿ.
  6. ಬೆಂದ ಪದಾರ್ಥಗಳನ್ನು ಕಡಗೋಲು ಉಪಯೋಗಿಸಿ ಚೆನ್ನಾಗಿ ಮಸೆಯಿರಿ. ಇಲ್ಲವೇ ಮಿಕ್ಸಿಗೆ ಹಾಕಿ ಒಂದೆರಡು ಸುತ್ತು ಅರೆಯಿರಿ. ತುಂಬ ನುಣ್ಣಗೆ ಮಾಡುವುದು ಬೇಡ.
  7. ಈಗ ಒಂದು ಸಣ್ಣ ಬಾಣಲೆ ತೆಗೆದುಕೊಂಡು ಎಣ್ಣೆ, ಮೆಣಸಿನಕಾಯಿ ಮತ್ತು ಸಾಸಿವೆ ಹಾಕಿ ಒಗ್ಗರಣೆ ಮಾಡಿ.
  8. ಕತ್ತರಿಸಿದ ಈರುಳ್ಳಿ, ಬೆಳ್ಳುಳ್ಳಿ ಮತ್ತು ಕರಿಬೇವು ಹಾಕಿ ಹುರಿಯಿರಿ.
  9. ಮಸೆದ ತರಕಾರಿ ಮತ್ತು ಬೇಳೆಯನ್ನು ಸೇರಿಸಿ.
  10. ಅಗತ್ಯವಿದ್ದಷ್ಟು ನೀರು ಮತ್ತು ರುಚಿಗೆ ತಕ್ಕಂತೆ ಉಪ್ಪು ಸೇರಿಸಿ. 
  11. ಒಂದು ಕುದಿ ಕುದಿಸಿ, ಸ್ಟವ್ ಆರಿಸಿ. ಬಿಸಿ ಅನ್ನ ಅಥವಾ ರಾಗಿ ಮುದ್ದೆಯೊಂದಿಗೆ ಬಡಿಸಿ.

ಶನಿವಾರ, ಆಗಸ್ಟ್ 17, 2024

Balekai mosaru kootu recipe in Kannada | ಬಾಳೆಕಾಯಿ ಮೊಸರು ಕೂಟು ಮಾಡುವ ವಿಧಾನ

 

Balekai mosaru kootu recipe in Kannada

Balekai mosaru kootu recipe in Kannada | ಬಾಳೆಕಾಯಿ ಮೊಸರು ಕೂಟು ಮಾಡುವ ವಿಧಾನ

ಬಾಳೆಕಾಯಿ ಮೊಸರು ಕೂಟು ವಿಡಿಯೋ

ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )

  1. 2 ಬಾಳೆಕಾಯಿ
  2. 1/2 ಕಪ್ ಮೊಸರು ಅಥವಾ ದಪ್ಪ ಮಜ್ಜಿಗೆ
  3. ಉಪ್ಪು ರುಚಿಗೆ ತಕ್ಕಷ್ಟು

ಅರೆಯಲು ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )

  1. 1/2 ಕಪ್ ತೆಂಗಿನತುರಿ
  2. 2 - 4 ಹಸಿಮೆಣಸಿನಕಾಯಿ
  3. 1 ಟೀಸ್ಪೂನ್ ಜೀರಿಗೆ

ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:

  1. 1/2 ಚಮಚ ಸಾಸಿವೆ
  2. 1 ಕೆಂಪು ಮೆಣಸಿನಕಾಯಿ
  3. ಒಂದು ಚಿಟಿಕೆ ಇಂಗು
  4. 5 - 6 ಕರಿಬೇವಿನ ಎಲೆ
  5. 2 ಟೀಸ್ಪೂನ್ ಎಣ್ಣೆ

ಬಾಳೆಕಾಯಿ ಮೊಸರು ಕೂಟು ಮಾಡುವ ವಿಧಾನ:

  1. ಬಾಳೆಕಾಯಿ ಸಿಪ್ಪೆ ತೆಗೆದು ಕತ್ತರಿಸಿ. 
  2. ಕತ್ತರಿಸಿದ ಬಾಳೆಕಾಯಿಯನ್ನು ಒಂದು ಪಾತ್ರೆಯಲ್ಲಿ ತೆಗೆದುಕೊಂಡು ಒಂದು ಚಮಚ ಉಪ್ಪು ಮತ್ತು ಅಗತ್ಯವಿದ್ದಷ್ಟು ನೀರು ಸೇರಿಸಿ
  3. ಮೆತ್ತಗಾಗುವವರೆಗೆ ಬೇಯಲು ಇಡಿ.   
  4. ಆ ಸಮಯದಲ್ಲಿ ಮಿಕ್ಸಿ ಜಾರಿನಲ್ಲಿ ತೆಂಗಿನತುರಿ, ಜೀರಿಗೆ ಮತ್ತು ಹಸಿಮೆಣಸಿನಕಾಯಿಯನ್ನು ಅಗತ್ಯವಿದ್ದಷ್ಟು ನೀರು ಸೇರಿಸಿ ನುಣ್ಣನೆ ರುಬ್ಬಿ ಕೊಳ್ಳಿ. 
  5. ರುಬ್ಬಿದ ಮಸಾಲೆಯನ್ನು ಬೇಯಿಸಿದ ಬಾಳೆಕಾಯಿಗೆ ಸೇರಿಸಿ.
  6. ನಿಮ್ಮ ರುಚಿ ಪ್ರಕಾರ ಉಪ್ಪು ಸೇರಿಸಿ.
  7. ಒಮ್ಮೆ ಕಲಸಿ. ಒಂದೆರಡು ನಿಮಿಷ ಕುದಿಸಿ ಸ್ಟವ್ ಆಫ್ ಮಾಡಿ.
  8. ಮಜ್ಜಿಗೆ ಅಥವಾ ಮೊಸರು ಸೇರಿಸಿ. ಮೊಸರು ಅಥವಾ ಮಜ್ಜಿಗೆ ಜಾಸ್ತಿ ಹುಳಿ ಇರುವುದು ಬೇಡ. 
  9. ಎಣ್ಣೆ, ಸಾಸಿವೆ, ಕೆಂಪು ಮೆಣಸಿನಕಾಯಿ, ಇಂಗು ಮತ್ತು ಕರಿಬೇವಿನ ಒಗ್ಗರಣೆ ಹಾಕಿ. ಬಿಸಿ ಅನ್ನದೊಂದಿಗೆ ಬಡಿಸಿ.

ಶನಿವಾರ, ಆಗಸ್ಟ್ 10, 2024

Bale dindu mosaru sasive recipe in kannada | ಬಾಳೆದಿಂಡು ಮೊಸರು ಸಾಸಿವೆ ಮಾಡುವ ವಿಧಾನ

 

Bale dindu mosaru sasive recipe in kannada

Bale dindu mosaru sasive recipe in kannada | ಬಾಳೆದಿಂಡು ಮೊಸರು ಸಾಸಿವೆ ಮಾಡುವ ವಿಧಾನ

ಬಾಳೆದಿಂಡು ಮೊಸರು ಸಾಸಿವೆ ವಿಡಿಯೋ

ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )

  1. 7 - 8 cm ಉದ್ದದ ಬಾಳೆದಿಂಡು
  2. 1/2 ಕಪ್ ಮೊಸರು 
  3. 1 ಟೀಸ್ಪೂನ್ ಉಪ್ಪು ಅಥವಾ ನಿಮ್ಮ ರುಚಿಗೆ ತಕ್ಕಷ್ಟು 

ಅರೆಯಲು ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )

  1. 2 ಹಸಿಮೆಣಸಿನಕಾಯಿ
  2. 1/2 ಕಪ್ ತೆಂಗಿನ ತುರಿ 
  3. 1/2 ಟೀಸ್ಪೂನ್ ಸಾಸಿವೆ

ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:

  1. 1/2 ಚಮಚ ಸಾಸಿವೆ
  2. 1 ಒಣ ಮೆಣಸಿನಕಾಯಿ
  3. 4 -5 ಕರಿಬೇವು
  4. 1 ಟೇಬಲ್  ಸ್ಪೂನ್ ಅಡುಗೆ ಎಣ್ಣೆ

ಬಾಳೆದಿಂಡು ಮೊಸರು ಸಾಸಿವೆ ಮಾಡುವ ವಿಧಾನ:

  1. ಬಾಳೆದಿಂಡಿನ ಹೊರಗಿನ ಸಿಪ್ಪೆಗಳನ್ನು ತೆಗೆಯಿರಿ.
  2. ಚಕ್ರಗಳಾಗಿ ಕತ್ತರಿಸಿ ನಾರನ್ನು ತೆಗೆಯಿರಿ.
  3. ನಂತರ ಸಣ್ಣದಾಗಿ ಕತ್ತರಿಸಿ.
  4. ನಿಂಬೆಹಣ್ಣಿನ ರಸ ಹಾಕಿದ ನೀರಿನಲ್ಲಿ ಹತ್ತು ನಿಮಿಷ ಹಾಕಿಡಿ.  
  5. ಆಮೇಲೆ ನೀರು ಬಗ್ಗಿಸಿ ತೆಗೆಯಿರಿ.
  6. ಉಪ್ಪು ಮತ್ತು ಸ್ವಲ್ಪ ನೀರು ಸೇರಿಸಿ ಬೇಯಲು ಇಡಿ. ಬೇಯಿಸದೆಯೂ ಮಾಡಬಹುದು. 
  7. ಹತ್ತು ನಿಮಿಷ ಬೇಯಿಸಿ ಸ್ಟವ್ ಆಫ್ ಮಾಡಿ. 
  8. ತೆಂಗಿನತುರಿ, ಹಸಿಮೆಣಸಿನಕಾಯಿ ಮತ್ತು ಸಾಸಿವೆಯನ್ನು ಅಗತ್ಯವಿದ್ದಷ್ಟು ನೀರು ಸೇರಿಸಿ ರುಬ್ಬಿ. 
  9. ಅದನ್ನು ಒಂದು ಪಾತ್ರೆಗೆ ಹಾಕಿ ಮೊಸರನ್ನು ಸೇರಿಸಿ.
  10. ಬೇಯಿಸಿದ ಬಾಳೆದಿಂಡನ್ನು ಬಿಸಿ ಕಡಿಮೆ ಆದಮೇಲೆ ನೀರು ಬಸಿದು ಸೇರಿಸಿ. 
  11. ರುಚಿಗೆ ತಕ್ಕಂತೆ ಉಪ್ಪು ಹಾಕಿ ಕಲಸಿ. 
  12. ಎಣ್ಣೆ, ಮೆಣಸಿನಕಾಯಿ, ಕರಿಬೇವು ಮತ್ತು ಸಾಸಿವೆಯ ಒಗ್ಗರಣೆ ಮಾಡಿ. 
  13. ಬಿಸಿಯಾದ ಅನ್ನ ಅಥವಾ ಚಪಾತಿಯೊಂದಿಗೆ ಬಡಿಸಿ.

ಶುಕ್ರವಾರ, ಜುಲೈ 5, 2024

Instant rasam recipe in Kannada | ದಿಢೀರ್ ಸಾರು ಮಾಡುವ ವಿಧಾನ

 

ದಿಢೀರ್ ಸಾರು ಮಾಡುವ ವಿಧಾನ

Instant rasam recipe in Kannada | ದಿಢೀರ್ ಸಾರು ಮಾಡುವ ವಿಧಾನ

ದಿಢೀರ್ ಸಾರು ವಿಡಿಯೋ

ಬೇಕಾಗುವ ಪದಾರ್ಥಗಳು: (ಅಳತೆ ಕಪ್ = 240ಎಂ ಎಲ್)

  1. 1/2 ಟೊಮೆಟೋ
  2. 1/2 ಟೀಸ್ಪೂನ್ ಸಾಸಿವೆ
  3. 7 - 8 ಕರಿಬೇವಿನ ಎಲೆ
  4. 1/4 ಟೀಸ್ಪೂನ್ ಅರಿಶಿನ ಪುಡಿ
  5. 1 ಟೇಬಲ್ ಸ್ಪೂನ್ ಸಣ್ಣದಾಗಿ ಕೊಚ್ಚಿದ ಕೊತ್ತಂಬರಿ ಸೊಪ್ಪು
  6. 1 ಟೇಬಲ್ ಸ್ಪೂನ್ ಎಣ್ಣೆ
  7. ಉಪ್ಪು ರುಚಿಗೆ ತಕ್ಕಷ್ಟು

ಅರೆಯಲು ಬೇಕಾಗುವ ಪದಾರ್ಥಗಳು: (ಅಳತೆ ಕಪ್ = 240ಎಂ ಎಲ್)

  1. 2 ಒಣ ಮೆಣಸಿನಕಾಯಿ
  2. 1 ಹಸಿಮೆಣಸಿನಕಾಯಿ
  3. 1 ಟೀಸ್ಪೂನ್ ಕಾಳುಮೆಣಸು
  4. 1 ಟೀಸ್ಪೂನ್ ಜೀರಿಗೆ
  5. 1/2 ಟೊಮೇಟೊ
  6. 7 - 8 ಎಸಳು ಬೆಳ್ಳುಳ್ಳಿ
  7. 1 ಟೇಬಲ್ ಸ್ಪೂನ್ ಕೊತ್ತಂಬರಿ ಸೊಪ್ಪು
  8. ನೆಲ್ಲಿಕಾಯಿ ಗಾತ್ರದ ಹುಣಿಸೇಹಣ್ಣು

ದಿಢೀರ್ ಸಾರು ಮಾಡುವ ವಿಧಾನ:

  1. ಅರೆಯಲು ಪಟ್ಟಿಮಾಡಿದ ಪದಾರ್ಥಗಳನ್ನು (ಒಣಮೆಣಸಿನಕಾಯಿ, ಹಸಿಮೆಣಸಿನಕಾಯಿ, ಕಾಳುಮೆಣಸು, ಜೀರಿಗೆ, ಟೊಮೇಟೊ, ಬೆಳ್ಳುಳ್ಳಿ, ಕೊತ್ತಂಬರಿ ಸೊಪ್ಪು ಮತ್ತು ಹುಣಿಸೇಹಣ್ಣು) ಮಿಕ್ಸಿಜಾರಿನಲ್ಲಿ ಸ್ವಲ್ಪ ನೀರು ಸೇರಿಸಿ ಅರೆದಿಟ್ಟುಕೊಳ್ಳಿ. 
  2. ನಂತರ ಎಣ್ಣೆ, ಸಾಸಿವೆ ಮತ್ತು ಕರಿಬೇವಿನ ಒಗ್ಗರಣೆ ಮಾಡಿ.  
  3. ಅದಕ್ಕೆ ಟೊಮೇಟೊ ಹಾಕಿ ಹುರಿಯಿರಿ. 
  4. ಅರೆದ ಮಸಾಲೆ ಪೇಸ್ಟ್ ಮತ್ತು ಸ್ವಲ್ಪ ನೀರು ಸೇರಿಸಿ. 
  5. ಉಪ್ಪು ಮತ್ತು ಅರಿಶಿನ ಪುಡಿ ಸೇರಿಸಿ ಮಗುಚಿ, ಕುದಿಸಿ. 
  6. ಸುಮಾರು ಅರ್ಧ ಲೀಟರ್ ನೀರು ಸೇರಿಸಿ ಕುದಿಸಿ. 
  7. ಕೊತ್ತಂಬರಿ ಸೊಪ್ಪು ಉದುರಿಸಿ, ಸ್ಟವ್ ಆಫ್ ಮಾಡಿ. 
  8. ಬಿಸಿಯಾದ ಅನ್ನದೊಂದಿಗೆ ಬಡಿಸಿ. ಅಥವಾ ಸೂಪ್ ತರಹ ಕುಡಿಯಲು ಕೊಡಿ. 

To see step by step pictures click here (ಹಂತ ಹಂತವಾದ ಚಿತ್ರ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ)

ಮಂಗಳವಾರ, ಜೂನ್ 11, 2024

Thodekai kayirasa recipe in Kannada | ತೊಂಡೆಕಾಯಿ ಕಾಯಿರಸ ಮಾಡುವ ವಿಧಾನ

 

Thodekai kayirasa recipe in Kannada

Thodekai kayirasa recipe in Kannada | ತೊಂಡೆಕಾಯಿ ಕಾಯಿರಸ ಮಾಡುವ ವಿಧಾನ

ತೊಂಡೆಕಾಯಿ ಕಾಯಿರಸ ವಿಡಿಯೋ

ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )

  1. 250 ಗ್ರಾಂ ತೊಂಡೆಕಾಯಿ
  2. 4 ಟೀಸ್ಪೂನ್ ಉದ್ದಿನ ಬೇಳೆ
  3. 2 ಹಸಿ ಮೆಣಸಿನಕಾಯಿ
  4. 1/2 ಕಪ್ ತೆಂಗಿನ ತುರಿ
  5. ಹುಣಸೆ ಹಣ್ಣು (ಬೇಕಾದಲ್ಲಿ, ನಾನು ಹಾಕಲಿಲ್ಲ)
  6. 1/4 ಟೀಸ್ಪೂನ್ ಅಡುಗೆ ಎಣ್ಣೆ
  7. ಉಪ್ಪು ರುಚಿಗೆ ತಕ್ಕಷ್ಟು.

ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:

  1. 1/4 ಟೀಸ್ಪೂನ್ ಸಾಸಿವೆ
  2. 4 - 5 ಕರಿಬೇವಿನ ಎಲೆ
  3. 1 ಟೀಸ್ಪೂನ್ ಅಡುಗೆ ಎಣ್ಣೆ

ತೊಂಡೆಕಾಯಿ ಕಾಯಿರಸ ಮಾಡುವ ವಿಧಾನ:

  1. ತೊಂಡೆಕಾಯಿ ತೊಳೆದು, ತುದಿ ಮತ್ತು ಬುಡ ತೆಗೆದು, ಉದ್ದುದ್ದವಾಗಿ ಕತ್ತರಿಸಿಕೊಳ್ಳಿ.
  2. ಕುಕ್ಕರ್‌ಗೆ ಕತ್ತರಿಸಿದ ತೊಂಡೆಕಾಯಿ ಹಾಕಿ. ಸ್ವಲ್ಪ ಉಪ್ಪು ಮತ್ತು ಅಗತ್ಯವಿದ್ದಷ್ಟು ನೀರು ಸೇರಿಸಿ ಬೇಯಿಸಿಕೊಳ್ಳಿ. 
  3. ಒಂದು ಬಾಣಲೆಯಲ್ಲಿ ಹಸಿಮೆಣಸಿನಕಾಯಿ, ಉದ್ದಿನ ಬೇಳೆ ಮತ್ತು 1/4 ಟೀಸ್ಪೂನ್ ಎಣ್ಣೆ ಹಾಕಿ, ಉದ್ದಿನ ಬೇಳೆ ಕಂದು ಬಣ್ಣಕ್ಕೆ ಬರುವ ತನಕ ಮಧ್ಯಮ ಉರಿಯಲ್ಲಿ ಹುರಿಯಿರಿ.
  4. ಮಿಕ್ಸಿ ಜಾರ್ಗೆ ತೆಂಗಿನತುರಿ ಮತ್ತು ಹುರಿದ ಉದ್ದಿನ ಬೇಳೆ ಹಾಕಿ ಅರೆಯಿರಿ. ನಂತರ ಹುರಿದ ಹಸಿಮೆಣಸನ್ನು ಸೇರಿಸಿ ಸುಮಾರು 5 ಸೆಕೆಂಡುಗಳ ಕಾಲ ಅರೆಯಿರಿ.
  5. ಬೇಯಿಸಿದ ತರಕಾರಿ ಬಿಸಿ ಆರಿದ ನಂತರ ಅರೆದ ಮಸಾಲೆ ಸೇರಿಸಿ, ಉಪ್ಪು ಹಾಕಿ ಕಲಸಿ. ಈ ಅಡುಗೆಯಲ್ಲಿ ಮಸಾಲೆ ಹಾಕಿದ ಮೇಲೆ ಕುದಿಸಬಾರದು.
  6. ಕಲಸಿದ ನಂತರ ಎಣ್ಣೆ, ಸಾಸಿವೆ ಮತ್ತು ಕರಿಬೇವಿನ ಸೊಪ್ಪಿನ ಒಗ್ಗರಣೆ ಮಾಡಿ. ಅನ್ನ ಅಥವಾ ಚಪಾತಿ ಜೊತೆ ಬಡಿಸಿ.
  7. ಈ ಅಡುಗೆಯನ್ನು 2-3 ಗಂಟೆಗಳ ಮೊದಲು ಬಳಸಿ ಅಥವಾ ಫ್ರಿಜ್ ನಲ್ಲಿ ಇಟ್ಟು ಉಪಯೋಗಿಸುವ ಮೊದಲು ಬಿಸಿಮಾಡಿಕೊಳ್ಳಿ.

ಶುಕ್ರವಾರ, ಏಪ್ರಿಲ್ 12, 2024

Mavinakayi dal recipe in Kannada | ಮಾವಿನಕಾಯಿ ತೊವ್ವೆ ಮಾಡುವ ವಿಧಾನ

 

Mavinakayi dal recipe in Kannada

Mavinakayi dal recipe in Kannada | ಮಾವಿನಕಾಯಿ ತೊವ್ವೆ ಮಾಡುವ ವಿಧಾನ

ಮಾವಿನಕಾಯಿ ತೊವ್ವೆ ವಿಡಿಯೋ

ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )

  1. 1/2 ಕಪ್ ತೊಗರಿಬೇಳೆ
  2. 1/2 ಕಪ್ ಮಾವಿನಕಾಯಿ
  3. 1/2 ಟೀಸ್ಪೂನ್ ಸಾಸಿವೆ
  4. 7 - 8 ಮೆಂತ್ಯ ಕಾಳು
  5. 2 ಹಸಿರು ಮೆಣಸಿನ ಕಾಯಿ (ನಿಮ್ಮ ಖಾರಕ್ಕೆ ತಕ್ಕಂತೆ)
  6. 7 - 8 ಕರಿಬೇವಿನ ಎಲೆ
  7. 7 - 8 ಎಸಳು ಬೆಳ್ಳುಳ್ಳಿ
  8. ದೊಡ್ಡ ಚಿಟಿಕೆ ಇಂಗು
  9. 1 ಈರುಳ್ಳಿ
  10. 1/4 ಟೀಸ್ಪೂನ್ ಅಚ್ಚಖಾರದ ಪುಡಿ
  11. ದೊಡ್ಡ ಚಿಟಿಕೆ ಅರಶಿನ ಪುಡಿ
  12. 1 ಟೇಬಲ್ ಚಮಚ ಕೊತ್ತಂಬರಿ ಸೊಪ್ಪು
  13. ಉಪ್ಪು ರುಚಿಗೆ ತಕ್ಕಷ್ಟು
  14. 1 ಟೇಬಲ್ ಚಮಚ ಅಡುಗೆ ಎಣ್ಣೆ

ಮಾವಿನಕಾಯಿ ತೊವ್ವೆ ಮಾಡುವ ವಿಧಾನ:

  1. ಮಾವಿನಕಾಯಿ ಸಿಪ್ಪೆ ತೆಗೆದು ಕತ್ತರಿಸಿಟ್ಟುಕೊಳ್ಳಿ. 
  2. ತೊಗರಿಬೇಳೆಯನ್ನು ತೊಳೆಯಿರಿ. 
  3. ಕತ್ತರಿಸಿದ ಮಾವಿನಕಾಯಿ, ಚಿಟಿಕೆ ಅರಿಶಿನ ಮತ್ತು ನಾಲ್ಕೈದು ಹನಿ ಎಣ್ಣೆ ಹಾಕಿ ಮೆತ್ತಗೆ ಬೇಯಿಸಿಕೊಳ್ಳಿ.
  4. ಬೇಯಿಸಿದ ಬೇಳೆ ಮತ್ತು ಮಾವಿನಕಾಯಿಯನ್ನು ಮಸಿದು ಪಕ್ಕಕ್ಕಿಡಿ. 
  5. ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ. ಸಾಸಿವೆ ಮತ್ತು ಮೆಂತ್ಯದ ಒಗ್ಗರಣೆ ಮಾಡಿ.
  6.  ಕತ್ತರಿಸಿದ ಹಸಿಮೆಣಸಿನಕಾಯಿ ಮತ್ತು ಕರಿಬೇವು ಸೇರಿಸಿ.
  7. ಕತ್ತರಿಸಿದ ಬೆಳ್ಳುಳ್ಳಿ ಮತ್ತು ಇಂಗು ಸೇರಿಸಿ ಹುರಿಯಿರಿ. 
  8. ರುಚಿಗೆ ತಕ್ಕಂತೆ ಅಚ್ಚಖಾರದ ಪುಡಿ ಸೇರಿಸಿ ಹುರಿಯಿರಿ.
  9. ಕತ್ತರಿಸಿದ ಈರುಳ್ಳಿ ಸೇರಿಸಿ ಹುರಿಯಿರಿ. 
  10. ಮಸಿದ ಬೇಳೆ ಮತ್ತು ಅಗತ್ಯವಿದ್ದಷ್ಟು ನೀರು ಸೇರಿಸಿ.
  11. ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಕುದಿಸಿ.
  12. ಕೊನೆಯಲ್ಲಿ ಕೊತ್ತಂಬರಿ ಸೊಪ್ಪು ಸೇರಿಸಿ.
  13. ಸ್ಟವ್ ಆಫ್ ಮಾಡಿ. ಬಿಸಿ ಅನ್ನದೊಂದಿಗೆ ಬಡಿಸಿ.

ಶುಕ್ರವಾರ, ಡಿಸೆಂಬರ್ 15, 2023

Onion rasam recipe in Kannada | ಈರುಳ್ಳಿ ಸಾರು ಮಾಡುವ ವಿಧಾನ

 

Onion rasam recipe in Kannada

Onion rasam recipe in Kannada | ಈರುಳ್ಳಿ ಸಾರು ಮಾಡುವ ವಿಧಾನ

ಈರುಳ್ಳಿ ಸಾರು ವಿಡಿಯೋ

ಬೇಕಾಗುವ ಪದಾರ್ಥಗಳು: (ಅಳತೆ ಕಪ್ = 240 ಎಂ ಎಲ್)

  1. 1 ಈರುಳ್ಳಿ ತೆಳ್ಳಗೆ ಕತ್ತರಿಸಿದ್ದು
  2. 7 - 8 ಎಸಳು ಬೆಳ್ಳುಳ್ಳಿ ಕತ್ತರಿಸಿದ್ದು
  3. 3 - 5 ಒಣಮೆಣಸಿನಕಾಯಿ
  4. 2 ಟೀಸ್ಪೂನ್ ಧನಿಯಾ ಅಥವಾ ಕೊತ್ತಂಬರಿ ಬೀಜ
  5. 1 ಟೀಸ್ಪೂನ್ ಜೀರಿಗೆ
  6. 7 - 8 ಕರಿಬೇವು
  7. 1/4 ಕಪ್ ತೆಂಗಿನಕಾಯಿ
  8. 1/4 ಟೀಸ್ಪೂನ್ ಅರಿಶಿನ
  9. ನೆಲ್ಲಿಕಾಯಿ ಗಾತ್ರದ ಹುಣಿಸೇಹಣ್ಣು
  10. ಬೆಲ್ಲ ರುಚಿಗೆ ತಕ್ಕಷ್ಟು
  11. 1 ಟೇಬಲ್ ಚಮಚ ಹೆಚ್ಚಿದ ಕೊತ್ತಂಬರಿ ಸೊಪ್ಪು
  12. ಉಪ್ಪು ರುಚಿಗೆ ತಕ್ಕಷ್ಟು
  13. 1 ಟೀಸ್ಪೂನ್ ಎಣ್ಣೆ

ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:

  1. 1/2 ಚಮಚ ಸಾಸಿವೆ
  2. 1 ಒಣಮೆಣಸಿನಕಾಯಿ
  3. 5 - 6 ಕರಿಬೇವಿನ ಎಲೆ
  4. 1 ಟೇಬಲ್ ಚಮಚ ಎಣ್ಣೆ

 ಈರುಳ್ಳಿ ಸಾರು ಮಾಡುವ ವಿಧಾನ:

  1. ಮೊದಲಿಗೆ ಒಂದು ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ.
  2. ಒಣಮೆಣಸಿನಕಾಯಿ, ಕೊತ್ತಂಬರಿ ಮತ್ತು  ಜೀರಿಗೆಯನ್ನು ಹಾಕಿ ಹುರಿಯಿರಿ. 
  3. ನಂತರ ಕತ್ತರಿಸಿದ ಈರುಳ್ಳಿ, ಬೆಳ್ಳುಳ್ಳಿ ಮತ್ತು ಕರಿಬೇವನ್ನು ಸೇರಿಸಿ.
  4. ಈರುಳ್ಳಿ ಮೆತ್ತಗಾಗುವವರೆಗೆ ಹುರಿಯಿರಿ. 
  5. ಬಿಸಿ ಅರಿದಮೇಲೆ ಮಿಕ್ಸಿ ಜಾರಿಗೆ ಹಾಕಿ.
  6. ತೆಂಗಿನಕಾಯಿಯನ್ನು ಸೇರಿಸಿ. 
  7. ಅಗತ್ಯವಿದ್ದಷ್ಟು ನೀರು ಸೇರಿಸಿ ನುಣ್ಣಗೆ ಅರೆಯಿರಿ. ಮಸಾಲೆ ಪೇಸ್ಟ್ ತಯಾರಾಯಿತು. 
  8. ಅದನ್ನು ಒಂದು ಪಾತ್ರೆಗೆ ಹಾಕಿ, ಅರಿಶಿನ ಸೇರಿಸಿ. 
  9. ರುಚಿಗೆ ತಕ್ಕಂತೆ ಉಪ್ಪು, ಹುಳಿ ಮತ್ತು ಬೆಲ್ಲ ಸೇರಿಸಿ. 
  10. ಅಗತ್ಯವಿದ್ದಷ್ಟು ನೀರು ಸೇರಿಸಿ. 
  11. ಒಂದು ನಿಮಿಷ ಚೆನ್ನಾಗಿ ಕುದಿಸಿ. 
  12. ಕೊತ್ತಂಬರಿ ಸೊಪ್ಪು ಸೇರಿಸಿ, ಸ್ಟವ್ ಆಫ್ ಮಾಡಿ.
  13. ಎಣ್ಣೆ, ಸಾಸಿವೆ, ಒಣಮೆಣಸಿನಕಾಯಿ ಮತ್ತು ಕರಿಬೇವಿನ ಒಗ್ಗರಣೆ ಮಾಡಿ.
  14. ಸಾರಿಗೆ ಒಗ್ಗರಣೆ ಹಾಕಿ, ಒಮ್ಮೆ ಕಲಸಿ, ಬಿಸಿ ಅನ್ನದೊಂದಿಗೆ ಬಡಿಸಿ.

To see step by step pictures click here (ಹಂತ ಹಂತವಾದ ಚಿತ್ರ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ)

ಶುಕ್ರವಾರ, ಜುಲೈ 7, 2023

Kobbari saaru recipe in Kannada | ಕೊಬ್ಬರಿ ಸಾರು ಮಾಡುವ ವಿಧಾನ

 

Kobbari saaru recipe in Kannada

Kobbari saaru recipe in Kannada | ಕೊಬ್ಬರಿ ಸಾರು ಮಾಡುವ ವಿಧಾನ

ಕೊಬ್ಬರಿ ಸಾರು ವಿಡಿಯೋ

ಬೇಕಾಗುವ ಪದಾರ್ಥಗಳು: (ಅಳತೆ ಕಪ್ = 240 ಎಂ ಎಲ್)

  1. 1/2 ಕಪ್ ಒಣಕೊಬ್ಬರಿ
  2. 1 ಟೀಸ್ಪೂನ್ ಕಾಳುಮೆಣಸು
  3. 1 ಟೀಸ್ಪೂನ್ ಜೀರಿಗೆ
  4. 2 - 4 ಒಣಮೆಣಸಿನಕಾಯಿ
  5. 10 - 12 ಎಸಳು ಬೆಳ್ಳುಳ್ಳಿ
  6. 1/4 ಟೀಸ್ಪೂನ್ ಅರಿಶಿನ
  7. ಉಪ್ಪು ರುಚಿಗೆ ತಕ್ಕಷ್ಟು
  8. ನೆಲ್ಲಿಕಾಯಿ ಗಾತ್ರದ ಹುಣಿಸೇಹಣ್ಣು
  9. 1 ಟೇಬಲ್ ಚಮಚ ಹೆಚ್ಚಿದ ಕೊತ್ತಂಬರಿ ಸೊಪ್ಪು
  10. 1 ಟೀಸ್ಪೂನ್ ಎಣ್ಣೆ

ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:

  1. 1/2 ಚಮಚ ಸಾಸಿವೆ
  2. 1/2 ಚಮಚ ಜೀರಿಗೆ
  3. 1 ಒಣಮೆಣಸಿನಕಾಯಿ
  4. 10 - 12 ಎಸಳು ಬೆಳ್ಳುಳ್ಳಿ
  5. 5 - 6 ಕರಿಬೇವಿನ ಎಲೆ
  6. 1 ಟೇಬಲ್ ಚಮಚ ಎಣ್ಣೆ

 ಕೊಬ್ಬರಿ ಸಾರು ಮಾಡುವ ವಿಧಾನ:

  1. ಮೊದಲಿಗೆ ಒಂದು ಬಾಣಲೆಯಲ್ಲಿ ಎಣ್ಣೆ, ಕಾಳುಮೆಣಸು ಮತ್ತು ಜೀರಿಗೆಯನ್ನು ಹಾಕಿ ಹುರಿಯಿರಿ. 
  2. ನಂತರ ಒಣಮೆಣಸಿನಕಾಯಿಯನ್ನು ಸೇರಿಸಿ ಹುರಿಯಿರಿ. 
  3. ಆಮೇಲೆ ಸಿಪ್ಪೆ ತೆಗೆದು ಕತ್ತರಿಸಿದ ಬೆಳ್ಳುಳ್ಳಿ ಮತ್ತು ಒಣಕೊಬ್ಬರಿ ಸೇರಿಸಿ ಸ್ವಲ್ಪ ಕಂದು ಬಣ್ಣ ಬರುವವರೆಗೆ ಹುರಿಯಿರಿ. 
  4. ಬಿಸಿ ಅರಿದಮೇಲೆ ಮಿಕ್ಸಿ ಜಾರಿಗೆ ಹಾಕಿ.
  5. ಅರಿಶಿನ ಮತ್ತು ಹುಣಿಸೆಹಣ್ಣಿನ ರಸ ಸೇರಿಸಿ, ಅಗತ್ಯವಿದ್ದಷ್ಟು ನೀರು ಸೇರಿಸಿ ಅರೆಯಿರಿ. ಮಸಾಲೆ ಪೇಸ್ಟ್ ತಯಾರಾಯಿತು. 
  6. ಇನ್ನೊಂದು ಬಾಣಲೆಯಲ್ಲಿ ಎಣ್ಣೆ, ಸಾಸಿವೆ ಮತ್ತು ಜೀರಿಗೆ ಒಗ್ಗರಣೆ ಮಾಡಿ.
  7. ಒಣಮೆಣಸಿನಕಾಯಿ, ಕತ್ತರಿಸಿದ ಬೆಳ್ಳುಳ್ಳಿ ಮತ್ತು ಕರಿಬೇವು ಸೇರಿಸಿ ಹುರಿಯಿರಿ. 
  8. ಉರಿ ಕಡಿಮೆ ಮಾಡಿ ಅರೆದ ಮಸಾಲೆ ಸೇರಿಸಿ. 
  9. ಅಗತ್ಯವಿದ್ದಷ್ಟು ನೀರು ಸೇರಿಸಿ. 
  10. ಉಪ್ಪು ಸೇರಿಸಿ ಕುದಿಸಿ. ನಿಮ್ಮ ರುಚಿಗೆ ತಕ್ಕಂತೆ ಉಪ್ಪು ಹುಳಿ ಮತ್ತು ಬೆಲ್ಲ ಹೊಂದಿಸಿಕೊಳ್ಳಿ. 
  11. ಒಂದು ನಿಮಿಷ ಚೆನ್ನಾಗಿ ಕುದಿಸಿ. 
  12. ಕೊತ್ತಂಬರಿ ಸೊಪ್ಪು ಸೇರಿಸಿ, ಸ್ಟವ್ ಆಫ್ ಮಾಡಿ.
  13. ಬಿಸಿಯಾದ ಅನ್ನದೊಂದಿಗೆ ಬಡಿಸಿ.

To see step by step pictures click here (ಹಂತ ಹಂತವಾದ ಚಿತ್ರ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ)

ಮಂಗಳವಾರ, ಜೂನ್ 28, 2022

Veelyadele saaru recipe in Kannada | ವೀಳ್ಯದೆಲೆ ಸಾರು ಮಾಡುವ ವಿಧಾನ

 

Veelyadele saaru recipe in Kannada

Veelyadele saaru recipe in Kannada | ವೀಳ್ಯದೆಲೆ ಸಾರು ಮಾಡುವ ವಿಧಾನ

ವೀಳ್ಯದೆಲೆ ಸಾರು ವಿಡಿಯೋ

ಬೇಕಾಗುವ ಪದಾರ್ಥಗಳು: (ಅಳತೆ ಕಪ್ = 240 ಎಂ ಎಲ್)

  1. 2 - 5ವೀಳ್ಯದೆಲೆ 
  2. 2 ಟೇಬಲ್ ಚಮಚ ತೊಗರಿಬೇಳೆ
  3. 1 ಟೊಮೇಟೊ
  4. 1/4 ಟೀಸ್ಪೂನ್ ಅರಿಶಿನ
  5. 1.5 ಟೀಸ್ಪೂನ್ ಉಪ್ಪು (ಅಥವಾ ನಿಮ್ಮ ರುಚಿಗೆ ತಕ್ಕಷ್ಟು)
  6. ನೆಲ್ಲಿಕಾಯಿ ಗಾತ್ರದ ಹುಣಿಸೇಹಣ್ಣು
  7. 1 - 2 ಟೀಸ್ಪೂನ್ ಬೆಲ್ಲ
  8. 1 ಟೇಬಲ್ ಚಮಚ ಹೆಚ್ಚಿದ ಕೊತ್ತಂಬರಿ ಸೊಪ್ಪು
  9. 2 ಟೇಬಲ್ ಚಮಚ ಸಾರಿನ ಪುಡಿ

ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:

  1. 1/2 ಚಮಚ ಸಾಸಿವೆ
  2. 1/2 ಚಮಚ ಜೀರಿಗೆ
  3. 1 ಒಣಮೆಣಸಿನಕಾಯಿ
  4. ದೊಡ್ಡ ಚಿಟಿಕೆ ಇಂಗು
  5. 5 - 6 ಕರಿಬೇವಿನ ಎಲೆ
  6. 2 ಟೇಬಲ್ ಚಮಚ ಎಣ್ಣೆ

 ವೀಳ್ಯದೆಲೆ ಸಾರು ಮಾಡುವ ವಿಧಾನ:

  1. ವೀಳ್ಯದೆಲೆಯನ್ನು ತೊಳೆದು, ತೊಟ್ಟು ತೆಗೆಯಿರಿ. 
  2. ನಂತರ ವೀಳ್ಯದೆಲೆಯನ್ನು ಕೈಯಲ್ಲಿ ಚೂರು ಮಾಡಿ ಮಿಕ್ಸಿ ಜಾರಿಗೆ ಹಾಕಿ.
  3. ತೊಳೆದ ತೊಗರಿಬೇಳೆ ಮತ್ತು ಕತ್ತರಿಸಿದ ಟೊಮೇಟೊ ಸೇರಿಸಿ. 
  4. ಅಗತ್ಯವಿದ್ದಷ್ಟು ನೀರು ಸೇರಿಸಿ, ನುಣ್ಣಗೆ ಅರೆಯಿರಿ. 
  5. ಒಂದು ಬಾಣಲೆಯಲ್ಲಿ ಎಣ್ಣೆ, ಸಾಸಿವೆ, ಜೀರಿಗೆ ಮತ್ತು ಒಣಮೆಣಸಿನಕಾಯಿಯ ಒಗ್ಗರಣೆ ಮಾಡಿ.  
  6. ಇಂಗು ಮತ್ತು ಕರಿಬೇವು ಸೇರಿಸಿ. 
  7. ಅರೆದ ಪೇಸ್ಟ್ ಮತ್ತು ಅರಿಶಿಣವನ್ನು ಸೇರಿಸಿ. 
  8. ಹಸಿ ವಾಸನೆ ಹೋಗುವವರೆಗೆ ಅಂದರೆ ಸುಮಾರು ಎರಡು ನಿಮಿಷ ಮಗುಚಿ ಬೇಯಿಸಿ. 
  9. ಅಗತ್ಯವಿದ್ದಷ್ಟು ನೀರು ಸೇರಿಸಿ. 
  10. ಉಪ್ಪು, ಹುಳಿ ಮತ್ತು ಬೆಲ್ಲ ಸೇರಿಸಿ ಕುದಿಸಿ. 
  11. ಕುದಿಯಲು ಶುರು ಆದ ಮೇಲೆ ಸಾರಿನ ಪುಡಿ ಹಾಕಿ. ಒಂದು ನಿಮಿಷ ಸಣ್ಣ ಉರಿಯಲ್ಲಿ ಕುದಿಸಿ. 
  12. ಕೊತ್ತಂಬರಿ ಸೊಪ್ಪು ಸೇರಿಸಿ, ಸ್ಟವ್ ಆಫ್ ಮಾಡಿ.
  13. ಬಿಸಿಯಾದ ಅನ್ನದೊಂದಿಗೆ ಬಡಿಸಿ.

To see step by step pictures click here (ಹಂತ ಹಂತವಾದ ಚಿತ್ರ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ)

ಬುಧವಾರ, ಮೇ 18, 2022

Hesaru kaalu saaru recipe in Kannada | ಹೆಸರು ಕಾಳು ಸಾರು ಮಾಡುವ ವಿಧಾನ

 

Hesaru kaalu saaru recipe in Kannada

Hesaru kaalu saaru recipe in Kannada |ಹೆಸರು ಕಾಳು ಸಾರು ಮಾಡುವ ವಿಧಾನ 

ಹೆಸರು ಕಾಳು ಸಾರು ವಿಡಿಯೋ

ಬೇಕಾಗುವ ಪದಾರ್ಥಗಳು: (ಅಳತೆ ಕಪ್ = 240ಎಂ ಎಲ್)

  1. 1/2 ಕಪ್ ಹೆಸರು ಕಾಳು
  2. 1 ಟೊಮೇಟೊ
  3. 1 ಟೇಬಲ್ ಚಮಚ ಸಾರಿನ ಪುಡಿ 
  4. ದೊಡ್ಡ ಚಿಟಿಕೆ ಅರಿಶಿನ
  5. 1 ಸಣ್ಣ ನೆಲ್ಲಿಕಾಯಿ ಗಾತ್ರದ ಹುಣಸೆ ಹಣ್ಣು (ಅಥವಾ ನಿಮ್ಮ ರುಚಿಗೆ ತಕ್ಕಷ್ಟು)
  6. 1 ಸಣ್ಣ ನೆಲ್ಲಿಕಾಯಿ ಗಾತ್ರದ ಬೆಲ್ಲ (ಅಥವಾ ನಿಮ್ಮ ರುಚಿಗೆ ತಕ್ಕಷ್ಟು
  7. 2 ಟೀಸ್ಪೂನ್ ಉಪ್ಪು (ಅಥವಾ ನಿಮ್ಮ ರುಚಿಗೆ ತಕ್ಕಷ್ಟು)
  8. 1 ಟೇಬಲ್ ಚಮಚ ಹೆಚ್ಚಿದ ಕೊತ್ತಂಬರಿ ಸೊಪ್ಪು

ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:

  1. 1/2 ಚಮಚ ಸಾಸಿವೆ
  2. 1/2 ಒಣಮೆಣಸಿನಕಾಯಿ
  3. ಒಂದು ಚಿಟಿಕೆ ಇಂಗು ಅಥವಾ 4 ಎಸಳು ಬೆಳ್ಳುಳ್ಳಿ
  4. 5 - 6 ಕರಿಬೇವಿನ ಎಲೆ
  5. 2 ಟೀಸ್ಪೂನ್ ಅಡುಗೆ ಎಣ್ಣೆ

ಹೆಸರು ಕಾಳು ಸಾರು ಮಾಡುವ ವಿಧಾನ:

  1. ಹೆಸರು ಕಾಳನ್ನು ತೊಳೆದು, ಅಗತ್ಯವಿದ್ದಷ್ಟು ನೀರು ಸೇರಿಸಿ, ಮೆತ್ತಗಾಗುವವರೆಗೆ ಬೇಯಿಸಿ. ನೆನೆಸಿ ಅಥವಾ ಮೊಳಕೆ ಬರಿಸಿ ಸಹ ಉಪಯೋಗಿಸಬಹುದು. 
  2. ಬೇಯಿಸಿದ ನಂತರ, ಬಸಿದು, ನೀರು ಮತ್ತು ಕಾಳನ್ನು ಬೇರ್ಪಡಿಸಿ. 
  3. ಬಸಿದ ನೀರಿಗೆ, ಕತ್ತರಿಸಿದ ಟೊಮೇಟೊ ಸೇರಿಸಿ. 
  4. ರುಚಿಗೆ ತಕ್ಕಂತೆ ಉಪ್ಪು, ಬೆಲ್ಲ ಮತ್ತು ಹುಣಿಸೇಹಣ್ಣು ಸೇರಿಸಿ. 
  5. ಟೊಮೇಟೊ ಮೆತ್ತಗಾಗುವವರೆಗೆ ಬೇಯಿಸಿ. 
  6.  ಆ ಸಮಯದಲ್ಲಿ ಎರಡರಿಂದ ಮೂರು ಸೌಟು ಬೇಯಿಸಿದ ಹೆಸರುಕಾಳನ್ನು ಅರೆದು ಬೆಂದ ಟೊಮ್ಯಾಟೊಗೆ ಸೇರಿಸಿ. 
  7. ಅಗತ್ಯವಿದ್ದಷ್ಟು ನೀರು ಸೇರಿಸಿ ಕುದಿಸಿ. 
  8. ಸಾರಿನ ಪುಡಿ ಮತ್ತು ಅರಿಶಿನ ಸೇರಿಸಿ. 
  9. ಕೊತ್ತಂಬರಿ ಸೊಪ್ಪು ಸೇರಿಸಿ. 
  10. ಚೆನ್ನಾಗಿ ಕುದಿಸಿ ಸ್ಟವ್ ಆಫ್ ಮಾಡಿ. 
  11. 2 ಚಮಚಎಣ್ಣೆ, 1/2 ಚಮಚ ಸಾಸಿವೆ, ಇಂಗು (ಅಥವಾ ಜಜ್ಜಿದ ಬೆಳ್ಳುಳ್ಳಿ) ಮತ್ತು ಕರಿಬೇವಿನ ಒಗ್ಗರಣೆ ಮಾಡಿ. ಒಗ್ಗರಣೆಯನ್ನು ಕುದಿಸಿದ ಸಾರಿಗೆ ಹಾಕಿ.  ಬಿಸಿಯಾದ ಅನ್ನದೊಂದಿಗೆ ಬಡಿಸಿ.

To see step by step pictures click here (ಹಂತ ಹಂತವಾದ ಚಿತ್ರ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ)

ಸೋಮವಾರ, ಏಪ್ರಿಲ್ 18, 2022

Quick onion sambar recipe in Kannada | 10 ನಿಮಿಷದಲ್ಲಿ ಸಾಂಬಾರ್ ಮಾಡುವ ವಿಧಾನ

 

Quick onion sambar recipe in Kannada

Quick onion sambar recipe in Kannada | 10 ನಿಮಿಷದಲ್ಲಿ ಸಾಂಬಾರ್ ಮಾಡುವ ವಿಧಾನ


10 ನಿಮಿಷದಲ್ಲಿ ಸಾಂಬಾರ್  ವಿಡಿಯೋ

ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್ )

  1. 2 ಟೊಮೇಟೊ
  2. 2 ಟೇಬಲ್ ಚಮಚ ಹುರಿಗಡಲೆ
  3. 1 ಈರುಳ್ಳಿ
  4. 1 ಟೀಸ್ಪೂನ್ ಅಚ್ಚಖಾರದ ಪುಡಿ
  5. 1 ಟೀಸ್ಪೂನ್ ಧನಿಯಾ ಅಥವಾ ಕೊತ್ತಂಬರಿ ಪುಡಿ
  6. 1/4 ಟೀಸ್ಪೂನ್ ಗರಂ ಮಸಾಲಾ
  7. ದೊಡ್ಡ ಚಿಟಿಕೆ ಅರಿಶಿನ ಪುಡಿ
  8. ಉಪ್ಪು ನಿಮ್ಮ ರುಚಿ ಪ್ರಕಾರ
  9. 1 ಟೀಸ್ಪೂನ್ ಬೆಲ್ಲ (ಅಥವಾ ನಿಮ್ಮ ರುಚಿ ಪ್ರಕಾರ)
  10. ಗೋಲಿ ಗಾತ್ರದ ಹುಣಿಸೇಹಣ್ಣು (ಅಥವಾ ನಿಮ್ಮ ರುಚಿ ಪ್ರಕಾರ)
  11. ಸ್ವಲ್ಪ ಕೊತ್ತಂಬರಿ ಸೊಪ್ಪು

ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:

  1. 1 ಕೆಂಪು ಮೆಣಸಿನಕಾಯಿ
  2. 1/2 ಟೀಸ್ಪೂನ್ ಸಾಸಿವೆ
  3. 1/2 ಟೀಸ್ಪೂನ್ ಜೀರಿಗೆ
  4. ಒಂದು ಚಿಟಿಕೆ ಇಂಗು
  5. 5 - 6 ಕರಿಬೇವು
  6. 2 ಟೇಬಲ್ ಚಮಚ ಅಡುಗೆ ಎಣ್ಣೆ

10 ನಿಮಿಷದಲ್ಲಿ ಸಾಂಬಾರ್ ಮಾಡುವ ವಿಧಾನ:

  1. ಮಿಕ್ಸಿಯಲ್ಲಿ ಟೊಮೇಟೊ ಮತ್ತು ಹುರಿಗಡಲೆಯನ್ನು ಅಗತ್ಯವಿದ್ದಷ್ಟು ನೀರು ಸೇರಿಸಿ ನುಣ್ಣಗೆ ಅರೆಯಿರಿ. 
  2. ಒಂದು ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ. ಮೆಣಸಿನಕಾಯಿ, ಸಾಸಿವೆ, ಜೀರಿಗೆ, ಇಂಗು ಮತ್ತು ಕರಿಬೇವು ಹಾಕಿ ಒಗ್ಗರಣೆ ಮಾಡಿ. 
  3. ಕತ್ತರಿಸಿದ ಈರುಳ್ಳಿ ಹಾಕಿ ಸಣ್ಣ ಉರಿಯಲ್ಲಿ ಹುರಿಯಿರಿ. 
  4. ಅಚ್ಚಖಾರದ ಪುಡಿ, ಧನಿಯಾ ಪುಡಿ, ಗರಂ ಮಸಾಲಾ ಮತ್ತು ಅರಿಶಿನ ಪುಡಿ ಸೇರಿಸಿ ಹುರಿಯಿರಿ. 
  5. ಅರೆದ ಟೊಮೇಟೊ ಮತ್ತು ಹುರಿಗಡಲೆ ಪೇಸ್ಟ್ ಸೇರಿಸಿ, ಅಗತ್ಯವಿದ್ದಷ್ಟು ನೀರು ಸೇರಿಸಿ ಕುದಿಯಲು ಇಡಿ. 
  6. ನಿಮ್ಮ ರುಚಿ ಪ್ರಕಾರ ಉಪ್ಪು, ಬೆಲ್ಲ ಮತ್ತು ಹುಣಿಸೆರಸವನ್ನು ಸೇರಿಸಿ. 
  7. ಐದು ನಿಮಿಷ ಕುದಿಸಿ ಸ್ಟವ್ ಆಫ್ ಮಾಡಿ. 
  8. ಕೊನೆಯಲ್ಲಿ ಕೊತ್ತಂಬರಿ ಸೊಪ್ಪು ಸೇರಿಸಿ. ಬಿಸಿ ಅನ್ನದೊಂದಿಗೆ ಬಡಿಸಿ. ದೋಸೆ ಅಥವಾ ಇಡ್ಲಿಯೊಂದಿಗೂ ಬಡಿಸಬಹುದು. 

ಶುಕ್ರವಾರ, ಜನವರಿ 28, 2022

Bele tovve recipe in Kannada | ಬೇಳೆ ತೊವ್ವೆ ಮಾಡುವ ವಿಧಾನ

 

Bele tovve recipe in Kannada | ಬೇಳೆ ತೊವ್ವೆ ಮಾಡುವ ವಿಧಾನ 

ಬೇಳೆ ತೊವ್ವೆ ವಿಡಿಯೋ

ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )

  1. 1/2 ಕಪ್ ತೊಗರಿಬೇಳೆ
  2. 1 ಟೀಸ್ಪೂನ್ ಸಾಸಿವೆ
  3. ಒಂದು ಒಣಮೆಣಸಿನಕಾಯಿ
  4. 7 - 8 ಕರಿಬೇವಿನ ಎಲೆ
  5. 1 - 2 ಹಸಿರು ಮೆಣಸಿನ ಕಾಯಿ (ನಿಮ್ಮ ಖಾರಕ್ಕೆ ತಕ್ಕಂತೆ)
  6. 1 ಟೀಸ್ಪೂನ್ ಶುಂಠಿ
  7. 1 ಟೊಮೇಟೊ
  8. 1/4 ಟೀಸ್ಪೂನ್ ಅರಶಿನ ಪುಡಿ
  9. ದೊಡ್ಡ ಚಿಟಿಕೆ ಇಂಗು
  10. 1 ಟೇಬಲ್ ಚಮಚ ಕೊತ್ತಂಬರಿ ಸೊಪ್ಪು
  11. ಉಪ್ಪು ರುಚಿಗೆ ತಕ್ಕಷ್ಟು
  12. 1 ಟೇಬಲ್ ಚಮಚ ಅಡುಗೆ ಎಣ್ಣೆ

ಬೇಳೆ ತೊವ್ವೆ ಮಾಡುವ ವಿಧಾನ:

  1. ತೊಗರಿಬೇಳೆಯನ್ನು ತೊಳೆದು, ಚಿಟಿಕೆ ಅರಿಶಿನ ಮತ್ತು ನಾಲ್ಕೈದು ಹನಿ ಎಣ್ಣೆ ಹಾಕಿ ಮೆತ್ತಗೆ ಬೇಯಿಸಿಕೊಳ್ಳಿ.
  2. ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ. ಒಣಮೆಣಸಿನಕಾಯಿ ಮತ್ತು ಸಾಸಿವೆ ಒಗ್ಗರಣೆ ಮಾಡಿ.
  3.  ಕತ್ತರಿಸಿದ ಶುಂಠಿ, ಹಸಿಮೆಣಸಿನಕಾಯಿ ಮತ್ತು ಕರಿಬೇವು ಸೇರಿಸಿ.
  4. ಇಂಗು ಮತ್ತು ಅರಿಶಿನ ಸೇರಿಸಿ.
  5. ಟೊಮೇಟೊ ಸೇರಿಸಿ, ಮೆತ್ತಗಾಗುವವರೆಗೆ ಹುರಿಯಿರಿ.
  6. ಮಸಿದ ಬೇಳೆ ಮತ್ತು ಅಗತ್ಯವಿದ್ದಷ್ಟು ನೀರು ಸೇರಿಸಿ.
  7. ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಕುದಿಸಿ.
  8. ಕೊನೆಯಲ್ಲಿ ಕೊತ್ತಂಬರಿ ಸೊಪ್ಪು ಸೇರಿಸಿ.
  9. ಸ್ಟವ್ ಆಫ್ ಮಾಡಿ. ಬಿಸಿ ಅನ್ನದೊಂದಿಗೆ ಬಡಿಸಿ.

ಮಂಗಳವಾರ, ಜನವರಿ 18, 2022

Dideer bele saaru recipe in Kannada | ದಿಢೀರ್ ಬೇಳೆ ಸಾರು ಮಾಡುವ ವಿಧಾನ

 

Dideer bele saaru recipe in Kannada

Dideer bele saaru recipe in Kannada | ದಿಢೀರ್ ಬೇಳೆ ಸಾರು ಮಾಡುವ ವಿಧಾನ 

Dideer bele saaru video

ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )

  1. 1/4 ಕಪ್ ತೊಗರಿಬೇಳೆ (ಅಥವಾ ಹೆಸರುಬೇಳೆ)
  2. 1 - 2 ಹಸಿರು ಮೆಣಸಿನ ಕಾಯಿ (ನಿಮ್ಮ ಖಾರಕ್ಕೆ ತಕ್ಕಂತೆ)
  3. 1 ಟೀಸ್ಪೂನ್ ಶುಂಠಿ
  4. 1 ಟೊಮೇಟೊ
  5. ನೆಲ್ಲಿಕಾಯಿ ಗಾತ್ರದ ಹುಣಿಸೇಹಣ್ಣು
  6. 1/4 ಟೀಸ್ಪೂನ್ ಅರಶಿನ ಪುಡಿ
  7. 1 ಟೇಬಲ್ ಚಮಚ ಕೊತ್ತಂಬರಿ ಸೊಪ್ಪು
  8. ಉಪ್ಪು ರುಚಿಗೆ ತಕ್ಕಷ್ಟು

ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:

  1. 1 ಟೀಸ್ಪೂನ್ ಸಾಸಿವೆ
  2. 1 ಟೀಸ್ಪೂನ್ ಜೀರಿಗೆ 
  3. ಒಂದು ಒಣಮೆಣಸಿನಕಾಯಿ
  4. 4 - 5 ಜಜ್ಜಿದ ಬೆಳ್ಳುಳ್ಳಿ
  5. 7 - 8 ಕರಿಬೇವಿನ ಎಲೆ
  6. 1 ಟೇಬಲ್ ಚಮಚ ತುಪ್ಪ ಅಥವಾ ಅಡುಗೆ ಎಣ್ಣೆ

ದಿಢೀರ್ ಬೇಳೆ ಸಾರು ಮಾಡುವ ವಿಧಾನ:

  1. ತೊಗರಿಬೇಳೆಯನ್ನು ತೊಳೆದು ಮೂವತ್ತು ನಿಮಿಷ ನೆನೆಸಿ. 
  2. ನಂತರ ಕತ್ತರಿಸಿದ ಹಸಿಮೆಣಸಿನಕಾಯಿ, ಶುಂಠಿ ಮತ್ತು ಟೊಮೇಟೊ ಸೇರಿಸಿ. 
  3. ಅರಶಿನ, ಹುಣಿಸೆರಸ, ಉಪ್ಪು ಮತ್ತು ಅರ್ಧ ಕಪ್ ನೀರು ಹಾಕಿ ಮೆತ್ತಗೆ ಬೇಯಿಸಿಕೊಳ್ಳಿ. 
  4. ಬೇಯಿಸಿದ ಬೇಳೆಯನ್ನು ಸೌಟಿನ ಹಿಂಭಾಗದಿಂದ ಚೆನ್ನಾಗಿ ಮಸಿದುಕೊಳ್ಳಿ. 
  5. ಒಂದು ಬಾಣಲೆಯಲ್ಲಿ ತುಪ್ಪ,  ಸಾಸಿವೆ ಮತ್ತು ಜೀರಿಗೆ ಹಾಕಿ ಒಗ್ಗರಣೆ ಮಾಡಿ. 
  6. ಒಣ ಮೆಣಸಿನಕಾಯಿ, ಕರಿಬೇವು ಮತ್ತು ಜಜ್ಜಿದ ಬೆಳ್ಳುಳ್ಳಿ ಹಾಕಿ ಹುರಿಯಿರಿ. 
  7. ಮಸಿದ ಬೇಳೆ ಮತ್ತು ಅಗತ್ಯವಿದ್ದಷ್ಟು ನೀರು ಸೇರಿಸಿ. 
  8. ರುಚಿಗೆ ತಕ್ಕಷ್ಟು ಉಪ್ಪು ಮತ್ತು ಬೆಲ್ಲ ಹಾಕಿ ಕುದಿಸಿ.
  9. ಕೊನೆಯಲ್ಲಿ ಕೊತ್ತಂಬರಿ ಸೊಪ್ಪು ಸೇರಿಸಿ. 
  10. ಚೆನ್ನಾಗಿ ಕುದಿಸಿ ಸ್ಟವ್ ಆಫ್ ಮಾಡಿ. ಬಿಸಿ ಅನ್ನದೊಂದಿಗೆ ಬಡಿಸಿ. 

ಮಂಗಳವಾರ, ನವೆಂಬರ್ 23, 2021

Nellikai saaru recipe in Kannada | ನೆಲ್ಲಿಕಾಯಿ ಸಾರು ಮಾಡುವ ವಿಧಾನ

 

Nellikai saaru recipe in Kannada

Nellikai saaru recipe in Kannada |ನೆಲ್ಲಿಕಾಯಿ ಸಾರು ಮಾಡುವ ವಿಧಾನ

ನೆಲ್ಲಿಕಾಯಿ ಸಾರು ವಿಡಿಯೋ

ಬೇಕಾಗುವ ಪದಾರ್ಥಗಳು: (ಅಳತೆ ಕಪ್ = 240 ಎಂ ಎಲ್)

  1. 2 ನೆಲ್ಲಿಕಾಯಿ 
  2. 2 ಟೀಸ್ಪೂನ್ ತೊಗರಿಬೇಳೆ
  3. 1 ಟೀಸ್ಪೂನ್ ಉದ್ದಿನಬೇಳೆ
  4. 2 ಟೀಸ್ಪೂನ್ ಕೊತ್ತಂಬರಿ ಬೀಜ ಅಥವಾ ಧನಿಯಾ
  5. 1/2 ಟೀಸ್ಪೂನ್ ಜೀರಿಗೆ
  6. ಸ್ವಲ್ಪ ಕರಿಮೆಣಸು 
  7. ಚಿಟಿಕೆ ಮೆಂತ್ಯ
  8. ಚಿಟಿಕೆ ಸಾಸಿವೆ
  9. 2 - 4 ಹಸಿಮೆಣಸಿನಕಾಯಿ
  10. 5 - 6 ಕರಿಬೇವಿನ ಎಲೆ
  11. 1/4 ಕಪ್ ತೆಂಗಿನ ತುರಿ
  12. 1.5 ಟೀಸ್ಪೂನ್ ಉಪ್ಪು (ಅಥವಾ ನಿಮ್ಮ ರುಚಿಗೆ ತಕ್ಕಷ್ಟು)
  13. 1/4 ಟೀಸ್ಪೂನ್ ಅರಿಶಿನ
  14. 1 ಟೇಬಲ್ ಚಮಚ ಹೆಚ್ಚಿದ ಕೊತ್ತಂಬರಿ ಸೊಪ್ಪು
  15. 1 ಟೀಸ್ಪೂನ್ ಅಡುಗೆ ಎಣ್ಣೆ

ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:

  1. 1/2 ಚಮಚ ಸಾಸಿವೆ
  2. 1 ಒಣಮೆಣಸಿನಕಾಯಿ
  3. ದೊಡ್ಡ ಚಿಟಿಕೆ ಇಂಗು
  4. 5 - 6 ಕರಿಬೇವಿನ ಎಲೆ
  5. 1 ಟೇಬಲ್ ಚಮಚ ಎಣ್ಣೆ

 ನೆಲ್ಲಿಕಾಯಿ ಸಾರು ಮಾಡುವ ವಿಧಾನ:

  1. ನೆಲ್ಲಿಕಾಯಿಯನ್ನು ತೊಳೆದು ಕತ್ತರಿಸಿ ಬೀಜ ತೆಗೆಯಿರಿ. 
  2. ಒಂದು ಬಾಣಲೆಯಲ್ಲಿ ತೊಗರಿಬೇಳೆ, ಉದ್ದಿನಬೇಳೆ, ಕೊತ್ತಂಬರಿ ಬೀಜ, ಜೀರಿಗೆ, ಕರಿಮೆಣಸು ಮೆಂತ್ಯ ಮತ್ತು ಸಾಸಿವೆಯನ್ನು ಒಂದು ಚಮಚ ಎಣ್ಣೆಯಲ್ಲಿ ಹುರಿಯಿರಿ.
  3. ಬೇಳೆಗಳು ಕಂದು ಬಣ್ಣ ಬಂದು, ಸುವಾಸನೆ ಬಂದ ಮೇಲೆ ಕತ್ತರಿಸಿದ ಹಸಿಮೆಣಸಿನಕಾಯಿ ಮತ್ತು ಕರಿಬೇವು ಹಾಕಿ ಹುರಿಯಿರಿ. ಸ್ಟವ್ ಆಫ್ ಮಾಡಿ.  
  4. ಮಿಕ್ಸಿ ಜಾರಿನಲ್ಲಿ ಕತ್ತರಿಸಿದ ನೆಲ್ಲಿಕಾಯಿ, ತೆಂಗಿನತುರಿ ಮತ್ತು ಹುರಿದ ಪದಾರ್ಥಗಳನ್ನು ಅಗತ್ಯವಿದ್ದಷ್ಟು ನೀರು ಸೇರಿಸಿ ಅರೆಯಿರಿ. 
  5. ಅದನ್ನು ಒಂದು ಪಾತ್ರೆಗೆ ಹಾಕಿ, ಅಗತ್ಯವಿದ್ದಷ್ಟು ನೀರು ಸೇರಿಸಿ (ಸುಮಾರು ಅರ್ಧ ಲೀಟರ್)
  6. ಉಪ್ಪು ಮತ್ತು ಅರಿಶಿನ ಸೇರಿಸಿ ಕುದಿಸಿ. 
  7. ಚೆನ್ನಾಗಿ ಕುದಿಸಿ, ಕೊತ್ತಂಬರಿ ಸೊಪ್ಪು ಸೇರಿಸಿ, ಸ್ಟವ್ ಆಫ್ ಮಾಡಿ. 
  8. ಆಮೇಲೆ ಎಣ್ಣೆ, ಸಾಸಿವೆ, ಒಣಮೆಣಸು, ಇಂಗು ಮತ್ತು ಕರಿಬೇವಿನ ಒಗ್ಗರಣೆ ಮಾಡಿ.
  9. ಬಿಸಿಯಾದ ಅನ್ನದೊಂದಿಗೆ ಬಡಿಸಿ.

To see step by step pictures click here (ಹಂತ ಹಂತವಾದ ಚಿತ್ರ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ)

ಗುರುವಾರ, ನವೆಂಬರ್ 11, 2021

Beans bili huli recipe in Kannada | ಬೀನ್ಸ್ ಬಿಳಿ ಹುಳಿ ಮಾಡುವ ವಿಧಾನ

 

Beans bili huli recipe in Kannada

Beans bili huli recipe in Kannada | ಬೀನ್ಸ್ ಬಿಳಿ ಹುಳಿ ಮಾಡುವ ವಿಧಾನ

ಬೀನ್ಸ್ ಸಾಂಬಾರ್ ವಿಡಿಯೋ

ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್ )

  1. 1/4kg ಬೀನ್ಸ್
  2. ದೊಡ್ಡ ಚಿಟಿಕೆ ಅರಿಶಿನ ಪುಡಿ
  3. 2 ಟೀಸ್ಪೂನ್ ಉಪ್ಪು (ಅಥವಾ ನಿಮ್ಮ ರುಚಿ ಪ್ರಕಾರ)
  4. 1/2 ಟೀಸ್ಪೂನ್ ನಿಂಬೆರಸ

ಮಸಾಲೆಗೆ ಬೇಕಾಗುವ ಪದಾರ್ಥಗಳು:

  1. 1/2 ಕಪ್ ತೆಂಗಿನ ತುರಿ
  2. 2 - 4 ಹಸಿಮೆಣಸಿನಕಾಯಿ
  3. 2 ಟೇಬಲ್ ಚಮಚ ಕಡ್ಲೆಬೇಳೆ
  4. 1 ಟೀಸ್ಪೂನ್ ಜೀರಿಗೆ
  5. 1/2 ಟೀಸ್ಪೂನ್ ಸಾಸಿವೆ

ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:

  1. 5 - 6 ಕರಿಬೇವು
  2. 1/2 ಟೀಸ್ಪೂನ್ ಸಾಸಿವೆ
  3. 1 ಟೀಸ್ಪೂನ್ ಅಡುಗೆ ಎಣ್ಣೆ

ಬೀನ್ಸ್ ಬಿಳಿ ಹುಳಿ ಮಾಡುವ ವಿಧಾನ:

  1. ಕಡ್ಲೆಬೇಳೆಯನ್ನು ಒಂದರಿಂದ ಎರಡು ಘಂಟೆ ನೆನೆಸಿ. 
  2. ಬೀನ್ಸ್ ನ್ನು ತೊಳೆದು ಕತ್ತರಿಸಿ.
  3. ಒಂದು ಕುಕ್ಕರ್ ನಲ್ಲಿ ಕತ್ತರಿಸಿದ ಬೀನ್ಸ್ ತೆಗೆದುಕೊಂಡು ಚಿಟಿಕೆ ಅರಶಿನ ಪುಡಿ, ಸ್ವಲ್ಪ ಉಪ್ಪು ಮತ್ತು 1 ಲೋಟ ನೀರು ಹಾಕಿ ಮೆತ್ತಗೆ ಬೇಯಿಸಿಕೊಳ್ಳಿ.
  4. ನಂತ್ರ ಒಂದು ಮಿಕಿ ಜಾರ್ ನಲ್ಲಿ ತೆಂಗಿನತುರಿ, ನೆನೆಸಿದ ಕಡ್ಲೆ ಬೇಳೆ, ಜೀರಿಗೆ ಮತ್ತು ಸಾಸಿವೆಯನ್ನು ಅಗತ್ಯವಿದ್ದಷ್ಟು ನೀರು ಸೇರಿಸಿ ನುಣ್ಣಗೆ ಅರೆಯಿರಿ. 
  5. ಅರೆದ ಮಸಾಲೆಯನ್ನು ತರಕಾರಿ ಇರುವ ಕುಕ್ಕರ್ ಗೆ ಹಾಕಿ. 
  6. ರುಚಿಗೆ ತಕ್ಕಷ್ಟು ಉಪ್ಪು ಹಾಕಿ.
  7. ಕೊನೆಯಲ್ಲಿ ಬೇಕಾದಷ್ಟು ನೀರು ಸೇರಿಸಿ (ಸುಮಾರು 1 ಕಪ್) ಮಗುಚಿ.  
  8. ಒಂದೆರಡು ನಿಮಿಷ ಚೆನ್ನಾಗಿ ಕುದಿಸಿ.
  9. ಸಾಸಿವೆ ಮತ್ತು ಕರಿಬೇವಿನ ಒಗ್ಗರಣೆ ಕೊಡಿ. ಬಿಸಿ ಅನ್ನದೊಂದಿಗೆ ಬಡಿಸಿ.

ಸೋಮವಾರ, ಆಗಸ್ಟ್ 23, 2021

Beans sambar recipe in Kannada | ಬೀನ್ಸ್ ಸಾಂಬಾರ್ ಮಾಡುವ ವಿಧಾನ

 

Beans sambar recipe in Kannada

Beans sambar recipe in Kannada | ಬೀನ್ಸ್ ಸಾಂಬಾರ್ ಮಾಡುವ ವಿಧಾನ

ಬೀನ್ಸ್ ಸಾಂಬಾರ್ ವಿಡಿಯೋ

ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್ )

  1. 1/4kg ಬೀನ್ಸ್
  2. 1/4 ಕಪ್ ತೊಗರಿಬೇಳೆ
  3. ದೊಡ್ಡ ಚಿಟಿಕೆ ಅರಿಶಿನ ಪುಡಿ
  4. 2 ಟೀಸ್ಪೂನ್ ಕಲ್ಲುಪ್ಪು (ಅಥವಾ ನಿಮ್ಮ ರುಚಿ ಪ್ರಕಾರ)
  5. 1/2 ಟೀಸ್ಪೂನ್ ಬೆಲ್ಲ (ಬೇಕಾದಲ್ಲಿ)
  6. ಸಣ್ಣ ಗೋಲಿ ಗಾತ್ರದ ಹುಣಿಸೇಹಣ್ಣು
  7. ಸ್ವಲ್ಪ ಕೊತ್ತಂಬರಿ ಸೊಪ್ಪು

ಮಸಾಲೆಗೆ ಬೇಕಾಗುವ ಪದಾರ್ಥಗಳು:

  1. 1/2 ಕಪ್ ತೆಂಗಿನ ತುರಿ
  2. 2 - 4 ಕೆಂಪು ಮೆಣಸಿನಕಾಯಿ
  3. 1 ಟೀಸ್ಪೂನ್ ಉದ್ದಿನ ಬೇಳೆ
  4. 2 ಟೀಸ್ಪೂನ್ ಕೊತ್ತಂಬರಿ ಬೀಜ
  5. 1/2 ಟೀಸ್ಪೂನ್ ಜೀರಿಗೆ
  6. 7 - 8 ಮೆಂತ್ಯ ಕಾಳು
  7. 1 ಟೀಸ್ಪೂನ್ ಅಡುಗೆ ಎಣ್ಣೆ

ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:

  1. 1 ಕೆಂಪು ಮೆಣಸಿನಕಾಯಿ
  2. 5 - 6 ಕರಿಬೇವು
  3. 1/2 ಟೀಸ್ಪೂನ್ ಸಾಸಿವೆ
  4. ಒಂದು ಚಿಟಿಕೆ ಇಂಗು
  5. 1 ಟೀಸ್ಪೂನ್ ಅಡುಗೆ ಎಣ್ಣೆ

ಬೀನ್ಸ್ ಸಾಂಬಾರ್ ಮಾಡುವ ವಿಧಾನ:

  1. ಬೀನ್ಸ್ ನ್ನು ತೊಳೆದು ಕತ್ತರಿಸಿ.
  2. ಬೇಳೆಯನ್ನು ಒಂದು ಕುಕ್ಕರ್ ನಲ್ಲಿ ತೆಗೆದುಕೊಂಡು ತೊಳೆಯಿರಿ. 1/2 ಕಪ್ ನೀರು, ಚಿಟಿಕೆ ಅರಶಿನ ಪುಡಿ ಮತ್ತು ಒಂದೆರಡು ಹನಿ ಎಣ್ಣೆ ಹಾಕಿ ಮೆತ್ತಗೆ ಬೇಯಿಸಿಕೊಳ್ಳಿ. 
  3. ಈಗ ಅದೇ ಕುಕ್ಕರ್ ಗೆ ಕತ್ತರಿಸಿದಬೀನ್ಸ್, ಸ್ವಲ್ಪ ಉಪ್ಪು ಮತ್ತು 1 ಲೋಟ ನೀರು ಹಾಕಿ ಮೆತ್ತಗೆ ಬೇಯಿಸಿಕೊಳ್ಳಿ.
  4. ನಂತ್ರ ಒಂದು ಬಾಣಲೆ ತೆಗೆದು ಕೊಂಡು, ಒಣ ಮೆಣಸಿನಕಾಯಿ, ಉದ್ದಿನಬೇಳೆ, ಕೊತ್ತಂಬರಿ ಬೀಜ, ಜೀರಿಗೆ ಮತ್ತು ಮೆಂತೆಯನ್ನು ಮಧ್ಯಮ ಉರಿಯಲ್ಲಿ 1 ಟೀಸ್ಪೂನ್ ಎಣ್ಣೆ ಹಾಕಿ ಹುರಿಯಿರಿ.
  5. ಹುರಿದ ಮಸಾಲೆ ಮತ್ತು ತೆಂಗಿನತುರಿಯನ್ನು ಅಗತ್ಯವಿದ್ದಷ್ಟು ನೀರು ಸೇರಿಸಿ ನುಣ್ಣಗೆ ಅರೆಯಿರಿ. 
  6. ಅರೆದ ಮಸಾಲೆಯನ್ನು ತರಕಾರಿ ಮತ್ತು ಬೇಳೆ ಇರುವ ಕುಕ್ಕರ್ ಗೆ ಹಾಕಿ. 
  7. ಉಪ್ಪು, ಬೆಲ್ಲ ಮತ್ತು ಹುಣಿಸೆರಸ ಹಾಕಿ.
  8. ಕೊನೆಯಲ್ಲಿ ಬೇಕಾದಷ್ಟು ನೀರು ಸೇರಿಸಿ, ಮಗುಚಿ, ಒಂದು ಕುದಿ ಕುದಿಸಿ.
  9. ಒಣ ಮೆಣಸಿನಕಾಯಿ, ಸಾಸಿವೆ, ಕರಿಬೇವಿನ ಮತ್ತು ಇಂಗಿನ ಒಗ್ಗರಣೆ ಕೊಡಿ. ಬಿಸಿ ಅನ್ನದೊಂದಿಗೆ ಬಡಿಸಿ.

ಮಂಗಳವಾರ, ಜೂನ್ 1, 2021

Thili saaru recipe in Kannada | ತಿಳಿ ಸಾರು ಮಾಡುವ ವಿಧಾನ

 

Thili saaru recipe in Kannada

Thili saaru recipe in Kannada | ತಿಳಿ ಸಾರು ಮಾಡುವ ವಿಧಾನ

ತಿಳಿ ಸಾರು ವಿಡಿಯೋ

ಬೇಕಾಗುವ ಪದಾರ್ಥಗಳು: (ಅಳತೆ ಕಪ್ = 240ಎಂ ಎಲ್)

  1. 1/2 ಕಪ್ ತೊಗರಿಬೇಳೆ
  2. 1 ಸಣ್ಣ ನೆಲ್ಲಿಕಾಯಿ ಗಾತ್ರದ ಹುಣಸೆ ಹಣ್ಣು (ಅಥವಾ ನಿಮ್ಮ ರುಚಿಗೆ ತಕ್ಕಷ್ಟು)
  3. 1 ಸಣ್ಣ ನೆಲ್ಲಿಕಾಯಿ ಗಾತ್ರದ ಬೆಲ್ಲ (ಅಥವಾ ನಿಮ್ಮ ರುಚಿಗೆ ತಕ್ಕಷ್ಟು)
  4. 2 ಟೀಸ್ಪೂನ್ ಉಪ್ಪು (ಅಥವಾ ನಿಮ್ಮ ರುಚಿಗೆ ತಕ್ಕಷ್ಟು)
  5. ಚಿಟಿಕೆ ಅರಿಶಿನ
  6. 1 ಟೇಬಲ್ ಚಮಚ ಹೆಚ್ಚಿದ ಕೊತ್ತಂಬರಿ ಸೊಪ್ಪು
  7. ಸ್ವಲ್ಪ ಕರಿಬೇವು
  8. 1 ಟೀಸ್ಪೂನ್ ಅಡುಗೆ ಎಣ್ಣೆ
  9. 4 - 5 ಕಪ್ ನೀರು

ಸಾರಿನ ಪುಡಿಗೆ ಬೇಕಾಗುವ ಪದಾರ್ಥಗಳು: (ಅಳತೆ ಕಪ್ = 240ಎಂ ಎಲ್)

  1. 2 ಚಮಚ ಕೊತ್ತಂಬರಿ ಬೀಜ ಅಥವಾ ಧನಿಯಾ
  2. 4 - 6 ಒಣಮೆಣಸಿನಕಾಯಿ
  3. 1/2 ಟೀಸ್ಪೂನ್ ಜೀರಿಗೆ 
  4. 1/4 ಟೀಸ್ಪೂನ್ ಸಾಸಿವೆ
  5. 10 - 12 ಮೆಂತ್ಯಕಾಳು
  6. 1/2 ಟೀಸ್ಪೂನ್ ಅಡುಗೆ ಎಣ್ಣೆ

ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:

  1. 1/2 ಚಮಚ ಸಾಸಿವೆ
  2. 1 ಒಣಮೆಣಸಿನಕಾಯಿ
  3. ಇಂಗು ಒಂದು ದೊಡ್ಡ ಚಿಟಿಕೆ
  4. 5 - 6 ಕರಿಬೇವಿನ ಎಲೆ
  5. 1 ಟೇಬಲ್ ಚಮಚ ತುಪ್ಪ ಅಥವಾ ಎಣ್ಣೆ

 ತಿಳಿ ಸಾರು ಮಾಡುವ ವಿಧಾನ:

  1. ತೊಗರಿಬೇಳೆಯನ್ನು ಚೆನ್ನಾಗಿ ತೊಳೆಯಿರಿ. 
  2. ಬೇಳೆಯ ಎರಡು ಪಟ್ಟು ನೀರು (ಒಂದು ಕಪ್), ಅರಿಶಿನ ಮತ್ತು ಐದಾರು ಹನಿ ಎಣ್ಣೆಯೊಂದಿಗೆ ಮೆತ್ತಗೆ ಬೇಯಿಸಿಕೊಳ್ಳಿ. 
  3. ನಂತ್ರ ಬೇಳೆಯನ್ನು ಮಸಿದು, ಉಳಿದ ನೀರನ್ನು ಹಾಕಿ ಚೆನ್ನಾಗಿ ಕುದಿಸಿ, ಕಟ್ಟು ತಯಾರಿಸಿಕೊಳ್ಳಿ. 
  4. ಆ ಸಮಯದಲ್ಲಿ ಒಂದು ಬಾಣಲೆಯಲ್ಲಿ ಕೊತ್ತಂಬರಿ ಬೀಜ, ಸಾಸಿವೆ, ಜೀರಿಗೆ, ಮೆಂತ್ಯ ಮತ್ತು ಒಣಮೆಣಸಿನಕಾಯಿಯನ್ನು ಅರ್ಧ ಚಮಚ ಎಣ್ಣೆ ಹಾಕಿ ಸಣ್ಣ ಉರಿಯಲ್ಲಿ ಹುರಿಯಿರಿ.
  5. ಬಿಸಿ ಆರಿದ ಮೇಲೆ ಪುಡಿ ಮಾಡಿಕೊಳ್ಳಿ. 
  6. ಬೇಳೆಯ ಕಟ್ಟಿಗೆ ಉಪ್ಪು, ಹುಳಿ ಮತ್ತು ಬೆಲ್ಲವನ್ನು ನಿಮ್ಮ ರುಚಿಗೆ ತಕ್ಕಂತೆ ಹಾಕಿ ಕುದಿಯಲು ಇಡಿ. 
  7. ದಪ್ಪ ಎನಿಸಿದಲ್ಲಿ ನೀರು ಸೇರಿಸಿ ಕುದಿಸಿ. 
  8. ತಯಾರಿಸಿದ ಮಸಾಲೆ ಪುಡಿ ಹಾಕಿ ಮಗುಚಿ, ಚೆನ್ನಾಗಿ ಕುದಿಸಿ. 
  9. ಕೊತ್ತಂಬರಿ ಸೊಪ್ಪು ಮತ್ತು ಕರಿಬೇವು ಹಾಕಿ. ಸ್ಟವ್ ಆಫ್ ಮಾಡಿ. 
  10. ಎಣ್ಣೆ, ಒಣಮೆಣಸಿನಕಾಯಿ, ಸಾಸಿವೆ, ಕರಿಬೇವು ಮತ್ತು ಇಂಗಿನ ಒಗ್ಗರಣೆ ಕೊಡಿ. 
  11. ಬಿಸಿಯಾದ ಅನ್ನದೊಂದಿಗೆ ಬಡಿಸಿ.

To see step by step pictures click here (ಹಂತ ಹಂತವಾದ ಚಿತ್ರ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ)

ಗುರುವಾರ, ಏಪ್ರಿಲ್ 29, 2021

Immunity saaru recipe in Kannada | ರೋಗನಿರೋಧಕ ಶಕ್ತಿ ಹೆಚ್ಚಿಸುವ ಸಾರು ಮಾಡುವ ವಿಧಾನ

 

Immunity saaru recipe in Kannada

Immunity saaru recipe in Kannada | ರೋಗನಿರೋಧಕ ಶಕ್ತಿ ಹೆಚ್ಚಿಸುವ ಸಾರು ಮಾಡುವ ವಿಧಾನ 

ರೋಗನಿರೋಧಕ ಶಕ್ತಿ ಹೆಚ್ಚಿಸುವ ಸಾರು ವಿಡಿಯೋ

ಬೇಕಾಗುವ ಪದಾರ್ಥಗಳು: (ಅಳತೆ ಕಪ್ = 240ಎಂ ಎಲ್)

  1. 2 ಮಧ್ಯಮ ಗಾತ್ರದ ಟೊಮೆಟೋ 
  2. 1/4 ಟೀಸ್ಪೂನ್ ಅರಿಶಿನ ಪುಡಿ
  3. 1 ನೆಲ್ಲಿಕಾಯಿ ಗಾತ್ರದ ಬೆಲ್ಲ (ಅಥವಾ ನಿಮ್ಮ ರುಚಿಗೆ ಅನುಗುಣವಾಗಿ)
  4. 2 ಟೀಸ್ಪೂನ್ ಉಪ್ಪು (ಅಥವಾ ನಿಮ್ಮ ರುಚಿಗೆ ತಕ್ಕಂತೆ) 
  5. 1 ಟೇಬಲ್ ಸ್ಪೂನ್ ಸಣ್ಣದಾಗಿ ಕೊಚ್ಚಿದ ಕೊತ್ತಂಬರಿ ಸೊಪ್ಪು
  6. 1/2 - 1 ನಿಂಬೆಹಣ್ಣು

ಅರೆಯಲು ಬೇಕಾಗುವ ಪದಾರ್ಥಗಳು: (ಅಳತೆ ಕಪ್ = 240ಎಂ ಎಲ್)

  1. 1 ಟೀಸ್ಪೂನ್ ಕೋತ್ತಂಬರಿ ಬೀಜ 
  2. 1 ಟೀಸ್ಪೂನ್ ಜೀರಿಗೆ
  3. 1 ಟೀಸ್ಪೂನ್ ಕಾಳು ಮೆಣಸು
  4. 2 ಒಣ ಮೆಣಸಿನಕಾಯಿ
  5. 1 ಇಂಚು ಉದ್ದದ ಶುಂಠಿ
  6. 10 ಎಸಳು ಬೆಳ್ಳುಳ್ಳಿ
  7. ಸ್ವಲ್ಪ ಕರಿಬೇವು

ಒಗ್ಗರಣೆಗೆ ಬೇಕಾಗುವ ಪದಾರ್ಥಗಳು: (ಅಳತೆ ಕಪ್ = 240ಎಂ ಎಲ್)

  1. 1/2 ಟೀಸ್ಪೂನ್ ಸಾಸಿವೆ
  2. 1/2 ಟೀಸ್ಪೂನ್ ಜೀರಿಗೆ
  3.  5 - 6 ಕರಿಬೇವಿನ ಎಲೆ
  4. 2 ಟೀಸ್ಪೂನ್ ಎಣ್ಣೆ ಅಥವಾ ತುಪ್ಪ 

ರೋಗನಿರೋಧಕ ಶಕ್ತಿ ಹೆಚ್ಚಿಸುವ ಸಾರು ಮಾಡುವ ವಿಧಾನ:

  1. ಅರೆಯಲು ಪಟ್ಟಿಮಾಡಿದ ಪದಾರ್ಥಗಳನ್ನು ಮಿಕ್ಸಿಜಾರಿನಲ್ಲಿ ನೀರು ಹಾಕದೆ ಪುಡಿಮಾಡಿಕೊಳ್ಳಿ. 
  2. ಮಸಾಲೆ ಪುಡಿಯನ್ನು ಒಂದು ಬಟ್ಟಲಿಗೆ ಹಾಕಿಡಿ. 
  3. ನಂತರ ಟೊಮೇಟೊವನ್ನು ತರಿತರಿಯಾಗಿ ಅರೆದುಕೊಳ್ಳಿ. 
  4. ಅರೆದ ಟೊಮ್ಯಾಟೊವನ್ನು ಒಂದು ಬಾಣಲೆಗೆ ಅಥವಾ ಪಾತ್ರೆಗೆ ಹಾಕಿ ಕುದಿಯಲು ಇಡಿ. 
  5. ಉಪ್ಪು ಮತ್ತು ಅರಿಶಿನ ಪುಡಿ ಸೇರಿಸಿ ಮಗುಚಿ.
  6. ಮುಚ್ಚಳ ಮುಚ್ಚಿ ಎರಡು ನಿಮಿಷ ಬೇಯಿಸಿ.  
  7. ಆಮೇಲೆ ಅಗತ್ಯವಿದ್ದಷ್ಟು ನೀರು, ಬೆಲ್ಲ ಮತ್ತು ರುಚಿಗೆ ತಕ್ಕಂತೆ ಉಪ್ಪು ಹಾಕಿ ಕುದಿಸಿ. 
  8. ತಯಾರಿಸಿದ ಮಸಾಲೆ ಹಾಕಿ ಕುದಿಸಿ. 
  9. ಕೊತ್ತಂಬರಿ ಸೊಪ್ಪು ಉದುರಿಸಿ, ಸ್ಟವ್ ಆಫ್ ಮಾಡಿ. 
  10. ರುಚಿಗೆ ತಕ್ಕಷ್ಟು ನಿಂಬೆ ಹಣ್ಣಿನ ರಸ ಹಾಕಿ. 
  11. ಎಣ್ಣೆ, ಸಾಸಿವೆ, ಜೀರಿಗೆ ಮತ್ತು ಕರಿಬೇವಿನ ಒಗ್ಗರಣೆ ಮಾಡಿ.  
  12. ಬಿಸಿಯಾದ ಅನ್ನದೊಂದಿಗೆ ಬಡಿಸಿ. ಅಥವಾ ಸೂಪ್ ತರಹ ಕುಡಿಯಲು ಕೊಡಿ. 

To see step by step pictures click here (ಹಂತ ಹಂತವಾದ ಚಿತ್ರ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ)

ಭಾನುವಾರ, ಏಪ್ರಿಲ್ 18, 2021

Halasinakayi huli or sambar recipe in Kannada | ಹಲಸಿನಕಾಯಿ ಹುಳಿ ಅಥವಾ ಸಾಂಬಾರ್ ಮಾಡುವ ವಿಧಾನ

 

Halasinakayi huli or sambar recipe in Kannada.

Halasinakayi huli or sambar recipe in Kannada | ಹಲಸಿನಕಾಯಿ ಹುಳಿ ಅಥವಾ ಸಾಂಬಾರ್ ಮಾಡುವ ವಿಧಾನ

ಹಲಸಿನಕಾಯಿ ಹುಳಿ ಅಥವಾ ಸಾಂಬಾರ್ ವಿಡಿಯೋ

ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್ )

  1. 1/2 ಎಳೆಯ ಹಲಸಿನಕಾಯಿ
  2. 4 ಟೇಬಲ್ ಚಮಚ ತೊಗರಿಬೇಳೆ
  3. ದೊಡ್ಡ ಚಿಟಿಕೆ ಅರಿಶಿನ ಪುಡಿ
  4. 2 ಟೀಸ್ಪೂನ್ ಕಲ್ಲುಪ್ಪು (ಅಥವಾ ನಿಮ್ಮ ರುಚಿ ಪ್ರಕಾರ)
  5. 1 ಟೀಸ್ಪೂನ್ ಬೆಲ್ಲ
  6. ಗೋಲಿ ಗಾತ್ರದ ಹುಣಿಸೇಹಣ್ಣು

ಮಸಾಲೆಗೆ ಬೇಕಾಗುವ ಪದಾರ್ಥಗಳು:

  1. 1/2 ಕಪ್ ತೆಂಗಿನ ತುರಿ
  2. 4 5 ಒಣ ಮೆಣಸಿನಕಾಯಿ
  3. 1 ಟೀಸ್ಪೂನ್ ಉದ್ದಿನ ಬೇಳೆ
  4. 2 ಟೀಸ್ಪೂನ್ ಕೊತ್ತಂಬರಿ ಬೀಜ
  5. 1/2 ಟೀಸ್ಪೂನ್ ಜೀರಿಗೆ
  6. 7 - 8 ಮೆಂತ್ಯ ಕಾಳು
  7. 1/4 ಟೀಸ್ಪೂನ್ ಸಾಸಿವೆ
  8. ಒಂದು ಚಿಟಿಕೆ ಇಂಗು
  9. ಸ್ವಲ್ಪ ಕರಿಬೇವು
  10. 1/2 ಟೀಸ್ಪೂನ್ ಅಡುಗೆ ಎಣ್ಣೆ

ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:

  1. 1 ಕೆಂಪು ಮೆಣಸಿನಕಾಯಿ
  2. 5 - 6 ಕರಿಬೇವು
  3. 1/4 ಟೀಸ್ಪೂನ್ ಸಾಸಿವೆ
  4. 4 - 5 ಜಜ್ಜಿದ ಬೆಳ್ಳುಳ್ಳಿ
  5. 1 ಟೀಸ್ಪೂನ್ ಅಡುಗೆ ಎಣ್ಣೆ

ಹಲಸಿನಕಾಯಿ ಹುಳಿ ಅಥವಾ ಸಾಂಬಾರ್ ಮಾಡುವ ವಿಧಾನ:

  1. ತೊಗರಿಬೇಳೆಯನ್ನು ಬೇಗ ಬೇಯುವ ಸಲುವಾಗಿ ಹದಿನೈದು ನಿಮಿಷ ನೆನೆಸಿಡಿ. 
  2. ಹಲಸಿನಕಾಯಿ ಹೊರಗಿನ ಸಿಪ್ಪೆ ಮತ್ತು ಒಳಗಿನ ತಿರುಳು ತೆಗೆದು ಕತ್ತರಿಸಿ ನೀರಿನಲ್ಲಿ ಹಾಕಿಡಿ.
  3. ನಂತ್ರ ಬೇಳೆಯನ್ನು ಒಂದು ಕುಕ್ಕರ್ ನಲ್ಲಿ ತೆಗೆದುಕೊಳ್ಳಿ. ನೀರಿನಲ್ಲಿ ಹಾಕಿಟ್ಟ ಹಲಸಿನಕಾಯಿ ಸೇರಿಸಿ. ಒಂದು ಚಮಚ ಉಪ್ಪು ಮತ್ತು ಚಿಟಿಕೆ ಅರಶಿನ ಪುಡಿ ಹಾಕಿ.
  4. ಅಗತ್ಯವಿದ್ದಷ್ಟು ನೀರು ಹಾಕಿ ಮೆತ್ತಗೆ ಬೇಯಿಸಿಕೊಳ್ಳಿ. 
  5. ಆ ಸಮಯದಲ್ಲಿ ಒಂದು ಬಾಣಲೆ ತೆಗೆದು ಕೊಂಡು, ಕೆಂಪು ಮೆಣಸಿನಕಾಯಿ, ಉದ್ದಿನಬೇಳೆ, ಕೊತ್ತಂಬರಿ ಬೀಜ, ಜೀರಿಗೆ, ಸಾಸಿವೆ ಮತ್ತು ಮೆಂತೆಯನ್ನು 1/2 ಟೀಸ್ಪೂನ್ ಎಣ್ಣೆ ಹಾಕಿ ಸಣ್ಣ ಉರಿಯಲ್ಲಿ ಬೇಳೆಗಳು ಕಂದು ಬಣ್ಣಕ್ಕೆ ಬರುವರೆಗೆ ಹುರಿಯಿರಿ. 
  6. ಸ್ಟವ್ ಆಫ್  ಮಾಡಿ, ಕರಿಬೇವು ಮತ್ತು ಇಂಗು ಸೇರಿಸಿ   ಹುರಿಯಿರಿ.
  7. ಹುರಿದ ಮಸಾಲೆ ಮತ್ತು ತೆಂಗಿನತುರಿಯನ್ನು ಅಗತ್ಯವಿದ್ದಷ್ಟು ನೀರು ಸೇರಿಸಿ ಅರೆಯಿರಿ. 
  8. ಅರೆದ ಮಸಾಲೆಯನ್ನು ತರಕಾರಿ ಮತ್ತು ಬೇಳೆ ಇರುವ ಕುಕ್ಕರ್ ಗೆ ಹಾಕಿ. 
  9. ಬೆಲ್ಲ, ಉಪ್ಪು ಮತ್ತು ಹುಣಿಸೆ ರಸ ಸೇರಿಸಿ. ನಿಮ್ಮ ರುಚಿ ಪ್ರಕಾರ ಉಪ್ಪು, ಸಿಹಿ ಮತ್ತು ಹುಳಿಯನ್ನು ಸರಿಮಾಡಿಕೊಳ್ಳಿ. 
  10. ಬೇಕಾದಷ್ಟು ನೀರು ಸೇರಿಸಿ, ಮಗುಚಿ, ಒಂದು ಕುದಿ ಕುದಿಸಿ. ಸ್ಟವ್ ಆಫ್ ಮಾಡಿ. 
  11. ಒಣ ಮೆಣಸು, ಸಾಸಿವೆ, ಜಜ್ಜಿದ ಬೆಳ್ಳುಳ್ಳಿ ಮತ್ತು ಕರಿಬೇವಿನ ಒಗ್ಗರಣೆ ಕೊಡಿ. ಬಿಸಿ ಅನ್ನದೊಂದಿಗೆ ಬಡಿಸಿ.

Related Posts Plugin for WordPress, Blogger...