ಮಂಗಳವಾರ, ನವೆಂಬರ್ 15, 2016

Badanekayi mosaru bajji recipe in Kannada | ಬದನೇಕಾಯಿ ಮೊಸರುಬಜ್ಜಿ ಮಾಡುವ ವಿಧಾನ

Badanekayi mosaru bajji recipe in Kannada

Badanekayi mosaru bajji recipe in Kannada | ಬದನೇಕಾಯಿ ಮೊಸರುಬಜ್ಜಿ ಮಾಡುವ ವಿಧಾನ 


ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್ )

  1. 1 ದೊಡ್ಡ ನೇರಳೆ ಬದನೇಕಾಯಿ ಅಥವಾ ಎರಡು ಸಣ್ಣ ಬದನೇಕಾಯಿ
  2. 1/2 ಟೀಸ್ಪೂನ್ ಕತ್ತರಿಸಿದ ಹಸಿರು ಮೆಣಸಿನಕಾಯಿ
  3. 2 ಟೀಸ್ಪೂನ್ ಕತ್ತರಿಸಿದ ಕೊತ್ತಂಬರಿ ಸೊಪ್ಪು
  4. ಉಪ್ಪು ರುಚಿಗೆ ತಕ್ಕಷ್ಟು
  5. 1 ಕಪ್ ಮೊಸರು

ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:

  1. 1 ಟೀಸ್ಪೂನ್ ಅಡುಗೆ ಎಣ್ಣೆ
  2. 1 ಒಣ ಮೆಣಸಿನಕಾಯಿ ಅಥವಾ ಮಜ್ಜಿಗೆ ಮೆಣಸು
  3. ಒಂದು ಚಿಟಿಕೆ ಇಂಗು
  4. 1/4 ಟೀಸ್ಪೂನ್ ಸಾಸಿವೆ

ಬದನೇಕಾಯಿ ಮೊಸರುಬಜ್ಜಿ ಮಾಡುವ ವಿಧಾನ:

  1. ಬದನೇಕಾಯಿ ತೊಳೆದು, ನೀರಾರಿಸಿ, ನೇರವಾಗಿ ಸ್ಟವ್ ನಲ್ಲಿ ಮೆತ್ತಗಾಗುವವರೆಗೆ ಸುಡಿ. ಬದನೇಕಾಯಿಯನ್ನು ತಿರುಗಿಸಿ ತಿರುಗಿಸಿ ಸುಡಬೇಕು. ಸುಮಾರು 7 - 8 ನಿಮಿಷ ಬೇಕಾಗುತ್ತದೆ. 
  2. ತಣ್ಣಗಾದ ಮೇಲೆ ಸಿಪ್ಪೆ ತೆಗೆದು ಫೋರ್ಕ್ ಅಥವಾ ಕೈಯಿಂದ ಕಿವುಚಿ.
  3. ಉಪ್ಪು ಮತ್ತು ಮೊಸರು ಸೇರಿಸಿ. 
  4. ನಂತರ ಕತ್ತರಿಸಿದ ಹಸಿರು ಮೆಣಸಿನಕಾಯಿ ಮತ್ತು ಕೊತ್ತಂಬರಿ ಸೊಪ್ಪು ಸೇರಿಸಿ ಕಲಸಿ. 
  5. ಎಣ್ಣೆ, ಒಣಮೆಣಸು, ಇಂಗು ಮತ್ತು ಸಾಸಿವೆಯ ಒಗ್ಗರಣೆ ಕೊಡಿ. ಅನ್ನ, ರೊಟ್ಟಿ ಅಥವಾ ಚಪಾತಿಯೊಂದಿಗೆ ಬಡಿಸಿ.

ಸೋಮವಾರ, ನವೆಂಬರ್ 14, 2016

Rave dose recipe in Kannada | ರವೆ ದೋಸೆ ಮಾಡುವ ವಿಧಾನ

Rave dose recipe in Kannada

Rave dose recipe in Kannada | ರವೆ ದೋಸೆ ಮಾಡುವ ವಿಧಾನ

Quick Video: Rave dose recipe 

ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )

  1. 1 ಕಪ್ ಅಕ್ಕಿ ಹಿಟ್ಟು
  2. 1/4 ಕಪ್ ಮೀಡಿಯಂ ರವೆ
  3. 1/8 ಕಪ್ ಮೈದಾ ಹಿಟ್ಟು
  4. 2.5 ಕಪ್ ನೀರು (ಸ್ವಲ್ಪ ಹೆಚ್ಚು ಕಡಿಮೆ; ದೋಸೆಕಲ್ಲು ಮತ್ತು ಹಿಟ್ಟಿನ ಗುಣಮಟ್ಟ ಅವಲಂಬಿಸಿ)
  5. ಎಣ್ಣೆ ಅಥವಾ ತುಪ್ಪ (ದೋಸೆ ಮಾಡುವಾಗ ಬಳಸಲು)
  6. ಉಪ್ಪು ರುಚಿಗೆ ತಕ್ಕಷ್ಟು

ಪದಾರ್ಥಗಳು (ಬೇಕಾದಲ್ಲಿ): ( ಅಳತೆ ಕಪ್ = 240 ಎಂಎಲ್ )

  1. 1/2 ಟೀಸ್ಪೂನ್ ಜೀರಿಗೆ
  2. 1 ಟೀಸ್ಪೂನ್ ಹೆಚ್ಚಿದ ಕೊತ್ತಂಬರಿ ಸೊಪ್ಪು 
  3. 1 ಟೀಸ್ಪೂನ್ ಹೆಚ್ಚಿದ ಕರಿಬೇವಿನ ಸೊಪ್ಪು 
  4. 5 - 6 ಜಜ್ಜಿದ ಕಾಳುಮೆಣಸು
  5. 1/2 ಟೀಸ್ಪೂನ್ ಸಣ್ಣಗೆ ಹೆಚ್ಚಿದ ಶುಂಠಿ
  6. 1 ಟೇಬಲ್ ಚಮಚ ತೆಂಗಿನ ತುರಿ (ನಾನು ಬಳಸಲಿಲ್ಲ)
  7. 1 ಸಣ್ಣದಾಗಿ ಕೊಚ್ಚಿದ ಹಸಿರು ಮೆಣಸಿನಕಾಯಿ (ನಾನು ಬಳಸಲಿಲ್ಲ)
  8. ಚಿಟಿಕೆ ಇಂಗು (ನಾನು ಬಳಸಲಿಲ್ಲ)
  9. ಚಿಟಿಕೆ ಅರಿಶಿನ ಪುಡಿ (ನಾನು ಬಳಸಲಿಲ್ಲ)

ರವೆ ದೋಸೆ ಮಾಡುವ ವಿಧಾನ:

  1. ಒಂದು ಪಾತ್ರೆಯಲ್ಲಿ ಅಕ್ಕಿ ಹಿಟ್ಟು, ರವೆ ಮತ್ತು ಮೈದಾ ಹಿಟ್ಟು ತೆಗೆದುಕೊಳ್ಳಿ.
  2. ನೀರು, ಉಪ್ಪು ಮತ್ತು ನಿಮ್ಮಿಚ್ಛೆಯ ಪದಾರ್ಥಗಳನ್ನು ಸೇರಿಸಿ. ನಾನು ಜೀರಿಗೆ, ಕೊತ್ತಂಬರಿ ಸೊಪ್ಪು, ಕರಿಬೇವಿನ ಸೊಪ್ಪು, ಕಾಳುಮೆಣಸು ಮತ್ತು ಶುಂಠಿ ಬಳಸಿದ್ದೇನೆ. 
  3. ಚೆನ್ನಾಗಿ ಕಲಸಿ, 15 - 20 ನಿಮಿಷ ನೆನೆಯಲು ಬಿಡಿ. ಗಮನಿಸಿ ರವೆ ದೋಸೆ ಹಿಟ್ಟು ನೀರ್ ದೋಸೆಯಂತೆ ತೆಳ್ಳಗಿರುತ್ತದೆ. 
  4. ಕಬ್ಬಿಣದ ದೋಸೆ ಕಲ್ಲು ಅಥವಾ ನಾನ್ ಸ್ಟಿಕ್ ಪ್ಯಾನ್ ಬಿಸಿ ಮಾಡಿ. ದೋಸೆ ಕಲ್ಲು ಕಾದಿದೆಯೇ ಎಂದು ತಿಳಿಯಲು ಎರಡು ಹನಿ ನೀರು ಚಿಮುಕಿಸಿ, ಚರ-ಪರ ಸದ್ದಿನೊಂದಿಗೆ ಆವಿಯಾದಲ್ಲಿ ಕಾದಿದೆ ಎಂದರ್ಥ. ಕಬ್ಬಿಣದ ದೋಸೆ ಕಲ್ಲಾದಲ್ಲಿ ಎಣ್ಣೆ ಹಚ್ಚಿ. 
  5. ಪ್ರತಿ ದೋಸೆ ಮಾಡುವ ಮುನ್ನ, ಹಿಟ್ಟನ್ನು ಚೆನ್ನಾಗಿ ಸೌಟಿನಲ್ಲಿ ಬೆರೆಸಿಕೊಳ್ಳ ಬೇಕು. ಬಿಸಿ ದೋಸೆ ಕಲ್ಲಿನ ಮೇಲೆ ದೋಸೆ ಹಿಟ್ಟನ್ನು ಸೌಟಿನಿಂದ ಸುರಿಯಿರಿ. 
  6. ಒಂದೈದು ಸೆಕೆಂಡುಗಳ ನಂತರ ಮೇಲಿನಿಂದ ಎಣ್ಣೆ ಅಥವಾ ತುಪ್ಪ ಹಾಕಿ. ಈ ದೋಸೆಗೆ ಮುಚ್ಚಳ ಮುಚ್ಚ ಬೇಕಾಗಿಲ್ಲ. 
  7. ನಂತರ ಉರಿಯನ್ನು ಕಡಿಮೆ ಮಾಡಿ, 5 - 10 ಸೆಕೆಂಡುಗಳ ಕಾಲ ಬಿಟ್ಟು, ದೋಸೆ ಸಟ್ಟುಗ ಉಪಯೋಗಿಸಿ ದೋಸೆಯನ್ನು ತೆಗೆಯಿರಿ. ದೋಸೆ ಕಲ್ಲಿನ ಮೇಲೆಯೇ ದೋಸೆಯನ್ನು ಮಡಿಸಿ. ತೆಂಗಿನ ಚಟ್ನಿ, ಸಾಂಬಾರ್ ಅಥವಾ ಸಾಗುವಿನೊಂದಿಗೆ ಬಡಿಸಿ.

Avalakki upkari recipe in Kannada | ಅವಲಕ್ಕಿ ಉಪ್ಕರಿ ಮಾಡುವ ವಿಧಾನ

Avalakki upkari recipe in Kannada

Avalakki upkari recipe in Kannada | ಅವಲಕ್ಕಿ ಉಪ್ಕರಿ ಮಾಡುವ ವಿಧಾನ 

ಅವಲಕ್ಕಿ ಉಪ್ಕರಿ ವಿಡಿಯೋ

ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )

  1. 2 ಕಪ್ ತೆಳು ಅವಲಕ್ಕಿ
  2. 2 ಟೇಬಲ್ ಚಮಚ ಕಡಲೇಕಾಯಿ ಅಥವಾ ಶೇಂಗಾ
  3. 1/2 ಟೀಸ್ಪೂನ್ ಸಾಸಿವೆ 
  4. 1/2 ಟೀಸ್ಪೂನ್ ಉದ್ದಿನ ಬೇಳೆ 
  5. 1/2 ಟೀಸ್ಪೂನ್ ಕಡಲೆಬೇಳೆ (ಬೇಕಾದಲ್ಲಿ) 
  6. 1 - 2 ಹಸಿರು ಮೆಣಸಿನಕಾಯಿ 
  7. 4 - 5 ಕರಿಬೇವಿನ ಎಲೆ 
  8. 1/2 ಕಪ್ ತೆಂಗಿನ ತುರಿ 
  9. 2 ಟೀಸ್ಪೂನ್ ಸಕ್ಕರೆ 
  10. ಉಪ್ಪು ರುಚಿಗೆ ತಕ್ಕಷ್ಟು 
  11. 4 ಟೀಸ್ಪೂನ್ ಅಡುಗೆ ಎಣ್ಣೆ 
  12. 2 ಟೇಬಲ್ ಚಮಚ ನೀರು ಅಥವಾ ಹಾಲು (ಬೇಕಾದಲ್ಲಿ)

ಅವಲಕ್ಕಿ ಉಪ್ಕರಿ ಮಾಡುವ ವಿಧಾನ:

  1. ಒಂದು ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ, ಕಡಲೇಕಾಯಿಯನ್ನು ಹುರಿಯಿರಿ. 
  2. ನಂತರ ಸಾಸಿವೆ, ಕಡ್ಲೆಬೇಳೆ, ಉದ್ದಿನಬೇಳೆಯ ಒಗ್ಗರಣೆ ಮಾಡಿ. 
  3. ಅದಕ್ಕೆ ಸೀಳಿದ ಹಸಿರುಮೆಣಸಿನಕಾಯಿ ಮತ್ತು ಕರಿಬೇವಿನ ಎಲೆ ಹಾಕಿ. ಸ್ಟವ್ ಆಫ್ ಮಾಡಿ. ಬಿಸಿ ಆರುವವರೆಗೆ ಪಕ್ಕಕ್ಕಿಡಿ. 
  4. ಬಿಸಿ ಆರಿದ ಮೇಲೆ ತೆಂಗಿನ ತುರಿ,ಸಕ್ಕರೆ ಮತ್ತು ಉಪ್ಪು ಹಾಕಿ ಚೆನ್ನಾಗಿ ಕಲಸಿ. 
  5. ನಂತರ ಅದಕ್ಕೆ ಅವಲಕ್ಕಿಯನ್ನು ಹಾಕಿ ಕಲಸಿದರೆ ಅವಲಕ್ಕಿ ಉಪ್ಕರಿ ಸವಿಯಲು ಸಿದ್ಧ. 
  6. ಬೇಕಾದಲ್ಲಿ 2 ಟೇಬಲ್ ಚಮಚ ಹಾಲು ಅಥವಾ ನೀರು ಚಿಮುಕಿಸಿ ಕಲಸಬಹುದು.

Related Posts Plugin for WordPress, Blogger...