ಮಂಗಳವಾರ, ಜನವರಿ 8, 2019

Avarekalu soppu sambar recipe in Kannada | ಅವರೇಕಾಳು ಸೊಪ್ಪು ಸಾಂಬಾರ್ ಮಾಡುವ ವಿಧಾನ

Avarekalu soppu sambar recipe in Kannada

Avarekalu soppu sambar recipe in Kannada | ಅವರೇಕಾಳು ಸೊಪ್ಪು ಸಾಂಬಾರ್ ಮಾಡುವ ವಿಧಾನ 

ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್ )

  1. 1 ಕಟ್ಟು ಬಸಳೆ ಸೊಪ್ಪು ಅಥವಾ ಪಾಲಕ್ ಸೊಪ್ಪು
  2. 1 ಕಪ್ ಅವರೇಕಾಳು
  3. 1/4 ಟೀಸ್ಪೂನ್ ಅರಿಶಿನ ಪುಡಿ
  4. 2 ಟೀಸ್ಪೂನ್ ಕಲ್ಲುಪ್ಪು (ಅಥವಾ ನಿಮ್ಮ ರುಚಿ ಪ್ರಕಾರ)
  5. ಗೋಲಿ ಗಾತ್ರದ ಹುಣಿಸೇಹಣ್ಣು

ಮಸಾಲೆಗೆ ಬೇಕಾಗುವ ಪದಾರ್ಥಗಳು:

  1. 3/4 ಕಪ್ ತೆಂಗಿನ ತುರಿ
  2. 2 - 4 ಒಣ ಮೆಣಸಿನಕಾಯಿ
  3. 2 ಟೀಸ್ಪೂನ್ ಕೊತ್ತಂಬರಿ ಬೀಜ
  4. 1/2 ಟೀಸ್ಪೂನ್ ಸಾಸಿವೆ
  5. 2 - 4 ಬೇಳೆ ಬೆಳ್ಳುಳ್ಳಿ 
  6. 1 ಟೀಸ್ಪೂನ್ ಅಡುಗೆ ಎಣ್ಣೆ

ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:

  1. 1 ಕೆಂಪು ಮೆಣಸಿನಕಾಯಿ
  2. 5 - 6 ಕರಿಬೇವು
  3. 1/2 ಟೀಸ್ಪೂನ್ ಸಾಸಿವೆ
  4. 2 ಟೀಸ್ಪೂನ್ ಅಡುಗೆ ಎಣ್ಣೆ

ಬಸಳೆ ಸೊಪ್ಪು ಸಾಂಬಾರ್ ಮಾಡುವ ವಿಧಾನ: 

  1. ಅವರೆಕಾಳನ್ನು ಬಿಡಿಸಿಟ್ಟುಕೊಳ್ಳಿ. 
  2. ಬಸಳೆ ಎಲೆ ಮತ್ತು ದಂಟನ್ನು ಬೇರೆ ಮಾಡಿ ತೊಳೆಯಿರಿ. ದಂಟನ್ನು ಬೆರಳುದ್ದ ಕತ್ತರಿಸಿ. ಸೊಪ್ಪನ್ನು ಸಣ್ಣಗೆ ಕತ್ತರಿಸಿ.
  3. ಒಂದು ಕುಕ್ಕರ್ ನಲ್ಲಿ ಅವರೆಕಾಳನ್ನು ತೆಗೆದುಕೊಂಡು, ಅದಕ್ಕೆ ಕತ್ತರಿಸಿದ ಬಸಳೆ ಸೊಪ್ಪಿನ ದಂಟನ್ನು ಹಾಕಿ, ಅಗತ್ಯವಿದ್ದಷ್ಟು ನೀರು ಹಾಕಿ, ಎರಡು ವಿಷಲ್ ಮಾಡಿ. 
  4. ನಂತರ ಅದಕ್ಕೆ ಕತ್ತರಿಸಿದ ಸೊಪ್ಪು, ಸ್ವಲ್ಪ ಉಪ್ಪು ಮತ್ತು ಅರಿಶಿನ ಪುಡಿ ಹಾಕಿ. 
  5. ಅರ್ಧ ಲೋಟ ನೀರು ಹಾಕಿ ಪುನಃ ಒಂದು ವಿಷಲ್ ಮಾಡಿ ಬೇಯಿಸಿ ಕೊಳ್ಳಿ. 
  6. ಈಗ ಒಂದು ಬಾಣಲೆ ತೆಗೆದು ಕೊಂಡು, ಕೆಂಪು ಮೆಣಸಿನಕಾಯಿ, ಕೊತ್ತಂಬರಿ ಬೀಜ ಮತ್ತು ಸಾಸಿವೆಯನ್ನು ಮಧ್ಯಮ ಉರಿಯಲ್ಲಿ 1 ಟೀಸ್ಪೂನ್ ಎಣ್ಣೆ ಹಾಕಿ ಹುರಿಯಿರಿ.
  7. ಹುರಿದ ಮಸಾಲೆ ಮತ್ತು ತೆಂಗಿನತುರಿಯನ್ನು ನೀರು ಸೇರಿಸಿ ಅರೆಯಿರಿ. 
  8. ಕೊನೆಯಲ್ಲಿ ಬೆಳ್ಳುಳ್ಳಿ ಹಾಕಿ ಒಂದು ಸುತ್ತು ಅರೆದು ತೆಗೆಯಿರಿ. 
  9. ಅರೆದ ಮಸಾಲೆಯನ್ನು ತರಕಾರಿ ಮತ್ತು ಬೇಳೆ ಇರುವ ಕುಕ್ಕರ್ ಗೆ ಹಾಕಿ. ಉಪ್ಪು ಮತ್ತು ಹುಣಿಸೆರಸ ಹಾಕಿ.
  10. ಕೊನೆಯಲ್ಲಿ ಬೇಕಾದಷ್ಟು ನೀರು ಸೇರಿಸಿ, ಮಗುಚಿ, ಒಂದು ಕುದಿ ಕುದಿಸಿ. 
  11. ಒಣ ಮೆಣಸು, ಸಾಸಿವೆ, ಕರಿಬೇವಿನ ಒಗ್ಗರಣೆ ಕೊಡಿ. ಬಿಸಿ ಅನ್ನದೊಂದಿಗೆ ಬಡಿಸಿ.

ಶನಿವಾರ, ಜನವರಿ 5, 2019

Badane bol koddel recipe in Kannada | ಬದನೆ ಬೋಳು ಕೊದ್ದೆಲ್ ಮಾಡುವ ವಿಧಾನ

Badane bol koddel recipe in Kannada

Badane bol koddel recipe in Kannada | ಬದನೆ ಬೋಳು ಕೊದ್ದೆಲ್ ಮಾಡುವ ವಿಧಾನ 

ಬೇಕಾಗುವ ಪದಾರ್ಥಗಳು:(ಅಳತೆ ಕಪ್ = 240 ಎಂಎಲ್ )

  1. 4 ಮಧ್ಯಮ ಗಾತ್ರದ ಬದನೆಕಾಯಿ (ಉಡುಪಿ ಮಟ್ಟುಗುಳ್ಳ)
  2. 1/2 ಕಪ್ ತೊಗರಿಬೇಳೆ
  3. 1 - 2 ಹಸಿಮೆಣಸು
  4. 2 ಟೀಸ್ಪೂನ್ ಬೆಲ್ಲ
  5. ದೊಡ್ಡ ನೆಲ್ಲಿಕಾಯಿ ಗಾತ್ರದ ಹುಣಿಸೇಹಣ್ಣು
  6. 2 ಟೇಬಲ್ ಚಮಚ ಹೆಚ್ಚಿದ ಕೊತ್ತಂಬರಿ ಸೊಪ್ಪು
  7. ಉಪ್ಪು ರುಚಿಗೆ ತಕ್ಕಷ್ಟು

ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:

  1. 1 ಕೆಂಪು ಮೆಣಸಿನಕಾಯಿ
  2. 1/2 ಟೀಸ್ಪೂನ್ ಸಾಸಿವೆ
  3. 1/2 ಟೀಸ್ಪೂನ್ ಜೀರಿಗೆ
  4. 4 - 5 ಕರಿಬೇವಿನ ಎಲೆ 
  5. 2 ಟೀಸ್ಪೂನ್ ಎಣ್ಣೆ ಅಥವಾ ತುಪ್ಪ
  6. 1/4 ಟೀಸ್ಪೂನ್ ಇಂಗು

ಬದನೆ ಬೋಳು ಕೊದ್ದೆಲ್ ಅಥವಾ ಬೋಳು ಹುಳಿ ಮಾಡುವ ವಿಧಾನ:

  1. ಬದನೆಕಾಯಿಯನ್ನು ಕತ್ತರಿಸಿ 15 ನಿಮಿಷ ನೀರಿನಲ್ಲಿ ಹಾಕಿಡಿ. 
  2. ಒಂದು ಕುಕ್ಕರ್ ನಲ್ಲಿ ತೊಗರಿ ಬೇಳೆಯನ್ನು ಹಾಕಿ ತೊಳೆಯಿರಿ. ಅದಕ್ಕೆ ೧ ಕಪ್ ನೀರು, ಅರಶಿನ ಪುಡಿ ಮತ್ತು ಒಂದೆರಡು ಹನಿ ಎಣ್ಣೆ ಹಾಕಿ. 
  3. ಮುಚ್ಚಳ ಮುಚ್ಚಿ ಎರಡು ವಿಷಲ್ ಮಾಡಿ ಮೆತ್ತಗೆ ಬೇಯಿಸಿ. 
  4. ಈಗ ಬೇಳೆಯಿರುವ ಕುಕ್ಕರ್ ಗೆ ಕತ್ತರಿಸಿದ ಬದನೆಕಾಯಿ, ಉಪ್ಪು, ಹುಳಿ, ಬೆಲ್ಲ ಮತ್ತು ಸೀಳಿದ ಹಸಿರುಮೆಣಸಿನಕಾಯಿಯನ್ನು ಹಾಕಿ. 
  5. ನೀರು ಸೇರಿಸಿ ಬದನೆಕಾಯಿ ಮೆತ್ತಗಾಗುವವರೆಗೆ ಬೇಯಿಸಿ. 
  6. ಕೊತ್ತಂಬರಿ ಸೊಪ್ಪು ಸೇರಿಸಿ ಸ್ಟವ್ ಆಫ್ ಮಾಡಿ. ಬೇಕಾದಲ್ಲಿ ಉಪ್ಪು, ಸಿಹಿ ಮತ್ತು ಹುಳಿಯನ್ನು ಸರಿಹೊಂದಿಸಿ.
  7. ಸಣ್ಣ ಬಾಣಲೆ ಅಥವಾ ಒಗ್ಗರಣೆ ಸೌಟಿನಲ್ಲಿ ತುಪ್ಪ, ಕೆಂಪು ಮೆಣಸಿನಕಾಯಿ, ಸಾಸಿವೆ, ಜೀರಿಗೆ, ಇಂಗು ಮತ್ತು ಕರಿಬೇವಿನ ಒಗ್ಗರಣೆ ಮಾಡಿ ಸೇರಿಸಿ. ಬಿಸಿಯಾದ ಅನ್ನದೊಂದಿಗೆ ಬಡಿಸಿ.

ಗುರುವಾರ, ಜನವರಿ 3, 2019

Potato rice recipe in Kannada | ಆಲೂಗಡ್ಡೆ ರೈಸ್ ಮಾಡುವ ವಿಧಾನ

Potato rice recipe in Kannada

Potato rice recipe in Kannada | ಆಲೂಗಡ್ಡೆ ರೈಸ್ ಮಾಡುವ ವಿಧಾನ

ಆಲೂಗಡ್ಡೆ ರೈಸ್ ವಿಡಿಯೋ

ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್ )

  1. 1 ಕಪ್ ಅಕ್ಕಿ (ಸೋನಾ ಮಸೂರಿ)
  2. 2 ಆಲೂಗಡ್ಡೆ
  3. 1/2 ಟೀಸ್ಪೂನ್ ಜೀರಿಗೆ
  4. 1/2 ಟೀಸ್ಪೂನ್ ಸಾಸಿವೆ 
  5. 1 ಟೇಬಲ್ ಚಮಚ ಶುಂಠಿ+ಬೆಳ್ಳುಳ್ಳಿ
  6. 2 ಈರುಳ್ಳಿ
  7. 1 - 2 ಹಸಿರುಮೆಣಸಿನಕಾಯಿ
  8. ಸ್ವಲ್ಪ ಕರಿಬೇವು
  9. 2 ಟೊಮ್ಯಾಟೋ
  10. 1/4 ಟೀಸ್ಪೂನ್ ಅರಶಿನ ಪುಡಿ
  11. ಒಂದು ಸಣ್ಣ ಹಿಡಿ ಕೊತ್ತಂಬರಿ ಸೊಪ್ಪು
  12. ಒಂದು ಸಣ್ಣ ಹಿಡಿ ಮೆಂತೆ ಸೊಪ್ಪು
  13. ಒಂದು ಸಣ್ಣ ಹಿಡಿ ಪುದಿನ ಸೊಪ್ಪು
  14. 3 ಟೇಬಲ್ ಚಮಚ ಅಡುಗೆ ಎಣ್ಣೆ 
  15. 2.5 ಕಪ್ ನೀರು (ಅಕ್ಕಿಯ ಗುಣಮಟ್ಟ ಅವಲಂಬಿಸಿ)
  16. 2 ಟೀಸ್ಪೂನ್ ಉಪ್ಪು (ನಿಮ್ಮ ರುಚಿಗೆ ತಕ್ಕಷ್ಟು)

ಆಲೂಗಡ್ಡೆ ರೈಸ್ ಮಾಡುವ ವಿಧಾನ:

  1. ಅಕ್ಕಿಯನ್ನು ತೊಳೆದು ನೆನೆಸಿಟ್ಟುಕೊಳ್ಳಿ. 
  2. ಟೊಮ್ಯಾಟೋ, ಆಲೂಗಡ್ಡೆ, ಸೊಪ್ಪುಗಳು ಮತ್ತು ಈರುಳ್ಳಿಯನ್ನು ಕತ್ತರಿಸಿಟ್ಟುಕೊಳ್ಳಿ. 
  3. ಈಗ ಒಂದು ಕುಕ್ಕರ್ ತೆಗೆದುಕೊಂಡು ಎಣ್ಣೆ ಬಿಸಿಮಾಡಿ. ಜೀರಿಗೆ ಮತ್ತು ಸಾಸಿವೆ ಹಾಕಿ ಹುರಿಯಿರಿ. 
  4. ಜೀರಿಗೆ ಸಿಡಿದ ಕೂಡಲೇ ಸಣ್ಣಗೆ ಕತ್ತರಿಸಿದ ಶುಂಠಿ ಮತ್ತು ಬೆಳ್ಳುಳ್ಳಿ ಸೇರಿಸಿ. 
  5. ನಂತರ ಕತ್ತರಿಸಿದ ಈರುಳ್ಳಿ, ಕರಿಬೇವು ಮತ್ತು ಹಸಿರುಮೆಣಸಿನಕಾಯಿ ಹಾಕಿ ಹುರಿಯಿರಿ.
  6. ಈರುಳ್ಳಿ ಮೆತ್ತಗಾದ ಕೂಡಲೇ ಟೊಮ್ಯಾಟೋ ಹಾಕಿ.
  7. ಅರಿಶಿನ ಹಾಕಿ ಟೊಮೇಟೊ ಮೆತ್ತಗಾಗುವವರೆಗೆ ಹುರಿಯಿರಿ. 
  8. ನಂತರ ಕತ್ತರಿಸಿದ ಆಲೂಗಡ್ಡೆ, ಕೊತ್ತಂಬರಿ ಸೊಪ್ಪು, ಪುದಿನ ಸೊಪ್ಪು ಮತ್ತು ಮೆಂತೆ ಸೊಪ್ಪು ಹಾಕಿ ಹುರಿಯಿರಿ.
  9. ಆಮೇಲೆ ಅಚ್ಚಖಾರದ ಪುಡಿ ಮತ್ತು ಗರಂ ಮಸಾಲಾ ಸೇರಿಸಿ ಮಗುಚಿ.
  10. ನೆನೆಸಿಟ್ಟ 1 ಕಪ್ ಅಕ್ಕಿ ಹಾಕಿ. ಒಮ್ಮೆ ಚೆನ್ನಾಗಿ ಮಗುಚಿ. 2.5 ಕಪ್ ನೀರು ಸೇರಿಸಿ (ಅನ್ನಕ್ಕೆ ಬಳಸುವ ನೀರಿಗಿಂತ ಸ್ವಲ್ಪ ಕಡಿಮೆ).
  11. ಉಪ್ಪು ಹಾಕಿ, ಸ್ವಲ್ಪ ನಿಂಬೆ ರಸ ಸೇರಿಸಿ. ಮುಚ್ಚಳ ಮುಚ್ಚಿ 2 ವಿಷಲ್ ಮಾಡಿ.
  12. ಒತ್ತಡ ಕಡಿಮೆಯಾದ ಮೇಲೆ, ಮುಚ್ಚಳ ತೆರೆದು, ಜಾಗ್ರತೆಯಿಂದ ಮುದ್ದೆಯಾಗದಂತೆ ಕಲಸಿ, ಸವಿದು ಆನಂದಿಸಿ. 

Related Posts Plugin for WordPress, Blogger...