ಸೋಮವಾರ, ನವೆಂಬರ್ 28, 2016

Avarekalu akki rotti recipe in Kannada | ಅವರೇಕಾಳು ಅಕ್ಕಿರೊಟ್ಟಿ ಮಾಡುವ ವಿಧಾನ

Avarekalu akki rotti recipe in Kannada

Avarekalu akki rotti recipe in Kannada | ಅವರೇಕಾಳು ಅಕ್ಕಿರೊಟ್ಟಿ ಮಾಡುವ ವಿಧಾನ 

ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್ )

  1. 1 ಕಪ್ ಅಕ್ಕಿಹಿಟ್ಟು
  2. 1.5 ಕಪ್ ನೀರು (ಅಕ್ಕಿಹಿಟ್ಟಿನ ಗುಣಮಟ್ಟವನ್ನು ಅವಲಂಬಿಸಿ ಸ್ವಲ್ಪ ಹೆಚ್ಚು ಕಡಿಮೆ)
  3. 1 ಕಪ್ ಅವರೇಕಾಳು
  4. 2-4 ಸಣ್ಣಗೆ ಹೆಚ್ಚಿದ ಹಸಿರುಮೆಣಸಿನ ಕಾಯಿ
  5. 2 ಸಣ್ಣಗೆ ಹೆಚ್ಚಿದ ಈರುಳ್ಳಿ
  6. 1/2 ಕಪ್ ತೆಂಗಿನ ತುರಿ
  7. 4 ಟೇಬಲ್ ಚಮಚ ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪು 
  8. 2 ಟೀಸ್ಪೂನ್ ಜೀರಿಗೆ 
  9. ಉಪ್ಪು ರುಚಿಗೆ ತಕ್ಕಷ್ಟು
  10. 1/4 ಟೀಸ್ಪೂನ್ ಇಂಗು
  11. 1/4 ಕಪ್ ಅಡುಗೆ ಎಣ್ಣೆ
  12. 25x15cm ಗಾತ್ರದ ದಪ್ಪ ಪ್ಲಾಸ್ಟಿಕ್ ಹಾಳೆ / ಬಾಳೆ ಎಲೆ

ಅವರೇಕಾಳು ಅಕ್ಕಿ ರೊಟ್ಟಿ ಮಾಡುವ ವಿಧಾನ:

  1. ಅವರೇಕಾಳನ್ನು ಕುಕ್ಕರ್ನಲ್ಲಿ ಮೆತ್ತಗೆ ಬೇಯಿಸಿಕೊಳ್ಳಿ. 
  2. ಒಂದು ಬಾಣಲೆ ಅಥವಾ ಪಾತ್ರೆಯಲ್ಲಿ ನೀರು ಮತ್ತು ಉಪ್ಪು ಹಾಕಿ ಕುದಿಸಿ. ನೀರು ಕುಡಿಯಲು ಪ್ರಾರಂಭಿಸಿದ ಕೂಡಲೇ ಅಕ್ಕಿ ಹಿಟ್ಟು ಹಾಕಿ ಸ್ಟೋವ್ ಆಫ್ ಮಾಡಿ.
  3. ಈಗ ಬೇಯಿಸಿದ ಅವರೇಕಾಳು, ಕತ್ತರಿಸಿದ ಈರುಳ್ಳಿ , ಕೊತ್ತಂಬರಿ ಸೊಪ್ಪು, ಹಸಿರು ಮೆಣಸಿನಕಾಯಿ, ಜೀರಿಗೆ, ತೆಂಗಿನ ತುರಿ ಮತ್ತು ಇಂಗನ್ನು ಸೇರಿಸಿ ಚೆನ್ನಾಗಿ ಕಲಸಿ. ಬೇಕಾದಲ್ಲಿ ನೀರು ಅಥವಾ ಹಿಟ್ಟು ಸೇರಿಸಿ ಮೃದುವಾದ ಹಿಟ್ಟನ್ನು ತಯಾರಿಸಿಕೊಳ್ಳಿ.
  4. ಒಂದು ಸಣ್ಣ ಬಟ್ಟಲಿನಲ್ಲಿ ಎಣ್ಣೆಯನ್ನು ತೆಗೆದು ಕೊಳ್ಳಿ. ಪ್ಲಾಸ್ಟಿಕ್ ಹಾಳೆ ಅಥವಾ ಬಾಳೆ ಎಲೆಯ ಮೇಲೆ ಎಣ್ಣೆಯನ್ನು ಹಚ್ಚಿ ಒಂದು ಟೆನ್ನಿಸ್ ಚಂಡಿನ ಗಾತ್ರದ ಹಿಟ್ಟು ಇರಿಸಿ.
  5. ಈಗ ನಿಮ್ಮ ಬೆರಳುಗಳಿಗೆ ಎಣ್ಣೆ ಹಚ್ಚಿಕೊಂಡು, ಬೆರಳುಗಳಿಂದ ಮೆಲ್ಲನೆ ಒತ್ತುತ್ತಾ ವೃತ್ತಾಕಾರದ ಅಕ್ಕಿ ರೊಟ್ಟಿಯನ್ನು ತಟ್ಟಿ. ಆಗಾಗ್ಯೆ ಕೈ ಬೆರಳುಗಳಿಂದ ಎಣ್ಣೆ ಮುಟ್ಟುತ್ತಾ ರೊಟ್ಟಿ ತಟ್ಟುವುದರಿಂದ ಕೈಗೆ ಅಂಟುವುದಿಲ್ಲ.
  6. ಎಚ್ಚರಿಕೆಯಿಂದ ಪ್ಲಾಸ್ಟಿಕ್ ಹಾಳೆಯಲ್ಲಿರುವ ಅಕ್ಕಿ ರೊಟ್ಟಿಯನ್ನು ಕೈಯಲ್ಲಿ ತೆಗೆದುಕೊಂಡು ಬಿಸಿ ತವಾ ಮೇಲೆ ಹಾಕಿ. ಈ ಹಂತದಲ್ಲಿ ನೀವು ಎಚ್ಚರಿಕೆಯಿಂದಿರಬೇಕು ಮತ್ತು ವೇಗವಾಗಿರಬೇಕು. ಇಲ್ಲವಾದಲ್ಲಿ ರೊಟ್ಟಿ ಹರಿದುಹೋಗಬಹುದು.
  7. ಮೇಲಿನಿಂದ ಎಣ್ಣೆ ಹಾಕಿ, ಸುಮಾರು ಒಂದು ನಿಮಿಷದ ನಂತರ ರೊಟ್ಟಿಯನ್ನು ತಿರುವಿ ಹಾಕಿ. ಇನ್ನೊಂದು ಬದಿಯೂ ಕಾಯಿಸಿ. ಬೆಣ್ಣೆ ಅಥವಾ ಮೊಸರು ಅಥವಾ ಚಟ್ನಿಯೊಂದಿಗೆ ಬಡಿಸಿ.

ಶನಿವಾರ, ನವೆಂಬರ್ 26, 2016

Southekayi bol koddel or bolu huli recipe in Kannada | ಸೌತೆಕಾಯಿ ಬೋಳು ಕೊದ್ದೆಲ್ ಅಥವಾ ಬೋಳು ಹುಳಿ ಮಾಡುವ ವಿಧಾನ

Southekayi bol koddel or bolu huli recipe in Kannada

Southekayi bol koddel or bolu huli recipe in Kannada | ಸೌತೆಕಾಯಿ ಬೋಳು ಕೊದ್ದೆಲ್ ಅಥವಾ ಬೋಳು ಹುಳಿ ಮಾಡುವ ವಿಧಾನ 

ಬೇಕಾಗುವ ಪದಾರ್ಥಗಳು:(ಅಳತೆ ಕಪ್ = 240 ಎಂಎಲ್ )

  1. 1 ಮಧ್ಯಮ ಗಾತ್ರದ ಬಣ್ಣದ ಸೌತೆಕಾಯಿ
  2. 1/2 ಕಪ್ ತೊಗರಿಬೇಳೆ
  3. 1 - 2 ಹಸಿಮೆಣಸು
  4. 1 ಟೀಸ್ಪೂನ್ ಬೆಲ್ಲ
  5. 2 ಟೇಬಲ್ ಚಮಚ ಹೆಚ್ಚಿದ ಕೊತ್ತಂಬರಿ ಸೊಪ್ಪು
  6. ಉಪ್ಪು ರುಚಿಗೆ ತಕ್ಕಷ್ಟು

ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:

  1. 1 ಕೆಂಪು ಮೆಣಸಿನಕಾಯಿ
  2. 1/2 ಟೀಸ್ಪೂನ್ ಸಾಸಿವೆ
  3. 1/2 ಟೀಸ್ಪೂನ್ ಜೀರಿಗೆ
  4. 4 - 5 ಕರಿಬೇವಿನ ಎಲೆ 
  5. 2 ಟೀಸ್ಪೂನ್ ಎಣ್ಣೆ ಅಥವಾ ತುಪ್ಪ
  6. 1/4 ಟೀಸ್ಪೂನ್ ಇಂಗು

ಸೌತೆಕಾಯಿ ಬೋಳು ಕೊದ್ದೆಲ್ ಅಥವಾ ಬೋಳು ಹುಳಿ ಮಾಡುವ ವಿಧಾನ:

  1. ಒಂದು ಕುಕ್ಕರ್ ನಲ್ಲಿ ತೊಗರಿ ಬೇಳೆಯನ್ನು ಹಾಕಿ ತೊಳೆಯಿರಿ. ಅದಕ್ಕೆ ೧ ಕಪ್ ನೀರು, ಅರಶಿನ ಪುಡಿ ಮತ್ತು ಒಂದೆರಡು ಹನಿ ಎಣ್ಣೆ ಹಾಕಿ. 
  2. ಮುಚ್ಚಳ ಮುಚ್ಚಿ ಎರಡು ವಿಷಲ್ ಮಾಡಿ. ಈ ಹಂತದಲ್ಲಿ ಹಂತದಲ್ಲಿ ಬೇಳೆ ಅರ್ಧ ಬೆನ್ದಿರುತ್ತದೆ. 
  3. ಸೌತೆಕಾಯಿಯನ್ನು ತೊಳೆದು, ಸಿಪ್ಪೆ ತೆಗೆದು ಕತ್ತರಿಸಿ. 
  4. ಈಗ ಬೇಳೆಯಿರುವ ಕುಕ್ಕರ್ ಗೆ ಕತ್ತರಿಸಿದ ಸೌತೆಕಾಯಿ, ಉಪ್ಪು, ಬೆಲ್ಲ ಮತ್ತು ಸೀಳಿದ ಹಸಿರುಮೆಣಸಿನಕಾಯಿಯನ್ನು ಹಾಕಿ. 
  5. ನೀರು ಸೇರಿಸಿ ಎರಡು ವಿಷಲ್ ಮಾಡಿ ಅಥವಾ ಸೌತೆಕಾಯಿ ಮೆತ್ತಗಾಗುವವರೆಗೆ ಬೇಯಿಸಿ. 
  6. ಒತ್ತಡ ಇಳಿದ ನಂತರ ಮುಚ್ಚಳ ತೆರೆದು ಕೊತ್ತಂಬರಿ ಸೊಪ್ಪು ಸೇರಿಸಿ. ಬೇಕಾದಲ್ಲಿ ಉಪ್ಪು, ಸಿಹಿ ಮತ್ತು ಹುಳಿಯನ್ನು ಸರಿಹೊಂದಿಸಿ.
  7. ಸಣ್ಣ ಬಾಣಲೆ ಅಥವಾ ಒಗ್ಗರಣೆ ಸೌಟಿನಲ್ಲಿ ತುಪ್ಪ , ಕೆಂಪು ಮೆಣಸಿನಕಾಯಿ, ಸಾಸಿವೆ, ಜೀರಿಗೆ, ಇಂಗು ಮತ್ತು ಕರಿಬೇವಿನ ಒಗ್ಗರಣೆ ಮಾಡಿ ಸೇರಿಸಿ. ಬಿಸಿಯಾದ ಅನ್ನದೊಂದಿಗೆ ಬಡಿಸಿ.

ಗುರುವಾರ, ನವೆಂಬರ್ 24, 2016

Nargis mandakki recipe in Kannada | ನರ್ಗಿಸ್ ಮಂಡಕ್ಕಿ ಮಾಡುವ ವಿಧಾನ

Nargis mandakki recipe in Kannada

Nargis mandakki recipe in Kannada | ನರ್ಗಿಸ್ ಮಂಡಕ್ಕಿ ಮಾಡುವ ವಿಧಾನ 

ಬೇಕಾಗುವ ಪದಾರ್ಥಗಳು:( ಅಳತೆ ಕಪ್ = 240 ಎಂಎಲ್)

  1. 2 ಕಪ್ ಮಂಡಕ್ಕಿ 
  2. 1/4 ಟೀಸ್ಪೂನ್ ಸಾಸಿವೆ 
  3. 1/4 ಟೀಸ್ಪೂನ್ ಜೀರಿಗೆ 
  4. 4 - 5 ಕರಿಬೇವಿನ ಎಲೆ 
  5. 1 - 2 ಸಣ್ಣಗೆ ಹೆಚ್ಚಿದ ಹಸಿರು ಮೆಣಸಿನಕಾಯಿ
  6. 1 ಸಣ್ಣದಾಗಿ ಹೆಚ್ಚಿದ ಸಣ್ಣ ಈರುಳ್ಳಿ
  7. 1 ಸಣ್ಣದಾಗಿ ಹೆಚ್ಚಿದ ಸಣ್ಣ ಟೊಮೇಟೊ
  8. ಒಂದು ದೊಡ್ಡ ಚಿಟಿಕೆ ಅರಿಶಿನ ಪುಡಿ 
  9. 1/4 ಟೀಸ್ಪೂನ್ ಸಕ್ಕರೆ 
  10. 1/4 ಟೀಸ್ಪೂನ್ ಸಾಂಬಾರ್ ಪುಡಿ
  11. 1/2 ಚಮಚ ನಿಂಬೆ ರಸ (ಬೇಕಾದಲ್ಲಿ)
  12. 2 ಟೇಬಲ್ ಚಮಚ ಹೆಚ್ಚಿದ ಕೊತ್ತಂಬರಿ ಸೊಪ್ಪು
  13. 2 ಟೇಬಲ್ ಚಮಚ ಹಸಿ ತೆಂಗಿನ ತುರಿ
  14. 2 ಟೇಬಲ್ ಚಮಚ ಸೇವ್ (ಬೇಕಾದಲ್ಲಿ)
  15. 2 ಟೀಸ್ಪೂನ್ ಅಡುಗೆ ಎಣ್ಣೆ 
  16. ಉಪ್ಪು ರುಚಿಗೆ ತಕ್ಕಷ್ಟು

ನರ್ಗಿಸ್ ಮಂಡಕ್ಕಿ ಮಾಡುವ ವಿಧಾನ:

  1. ಒಂದು ಬಾಣಲೆಯಲ್ಲಿ ಎಣ್ಣೆ ಹಾಕಿ ಸಾಸಿವೆ, ಜೀರಿಗೆ ಮತ್ತು ಕರಿಬೇವಿನ ಒಗ್ಗರಣೆ ಮಾಡಿ. ಸ್ಟವ್ ಆಫ್ ಮಾಡಿ. 
  2. ಹೆಚ್ಚಿದ ಈರುಳ್ಳಿ, ಟೊಮೇಟೊ ಮತ್ತು ಹಸಿರು ಮೆಣಸಿನಕಾಯಿ ಹಾಕಿ ಕಲಸಿ. 
  3. ನಂತರ ಉಪ್ಪು, ಸಕ್ಕರೆ, ಸಾಂಬಾರ್ ಪುಡಿ ಮತ್ತು ನಿಂಬೆ ರಸ ಸೇರಿಸಿ ಕಲಸಿ. 
  4. ನಂತರ ಮಂಡಕ್ಕಿ, ಹಾಕಿ ಚೆನ್ನಾಗಿ ಕಲಸಿ. 
  5. ಸರ್ವಿಂಗ್ ಪ್ಲೇಟ್ ಗೆ ಕಲಸಿದ ಮಂಡಕ್ಕಿ ಹಾಕಿ. 
  6. ಕೊತ್ತಂಬರಿ ಸೊಪ್ಪು, ಹಸಿ ತೆಂಗಿನ ತುರಿ ಮತ್ತು ಸೇವ್ ನಿಂದ ಅಲಂಕರಿಸಿ. ಹಾಗು ಕೂಡಲೇ ಬಡಿಸಿ. ಸವಿದು ಆನಂದಿಸಿ. 
Related Posts Plugin for WordPress, Blogger...