ಬುಧವಾರ, ಜನವರಿ 31, 2018

Berake soppu sambar recipe in Kannada | ಬೆರಕೆ ಸೊಪ್ಪು ಸಾಂಬಾರ್ ಮಾಡುವ ವಿಧಾನ

Berake soppu sambar recipe in Kannada

Berake soppu sambar recipe in Kannada | ಬೆರಕೆ ಸೊಪ್ಪು ಸಾಂಬಾರ್ ಮಾಡುವ ವಿಧಾನ 

ಬೇಕಾಗುವ ಪದಾರ್ಥಗಳು:

  1. 1 ದೊಡ್ಡ ಕಟ್ಟು ಬೆರಕೆ ಸೊಪ್ಪು (ಪಾಲಕ್, ದಂಟು, ಹರಿವೆ, ಸಬ್ಸಿಗೆ, ಮೆಂತೆ ಇತ್ಯಾದಿ)
  2. 1 ಟೊಮೇಟೊ
  3. 1/4 ಟೀಸ್ಪೂನ್ ಅರಿಶಿನ ಪುಡಿ
  4. ಒಂದು ಸಣ್ಣ ನೆಲ್ಲಿಕಾಯಿ ಗಾತ್ರದ ಹುಣಿಸೇಹಣ್ಣು
  5. 1 ಟೀಸ್ಪೂನ್ ಬೆಲ್ಲ
  6. 2 ಟೀಸ್ಪೂನ್ ಉಪ್ಪು (ನಿಮ್ಮ ರುಚಿ ಪ್ರಕಾರ)

ಮಸಾಲೆಗೆ ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )

  1. 1/2 ಕಪ್ ತೆಂಗಿನ ತುರಿ
  2. 2 - 4 ಕೆಂಪು ಮೆಣಸಿನಕಾಯಿ
  3. 1 ಟೀಸ್ಪೂನ್ ಉದ್ದಿನ ಬೇಳೆ
  4. 2 ಟೀಸ್ಪೂನ್ ಕೊತ್ತಂಬರಿ ಬೀಜ
  5. 1/2 ಟೀಸ್ಪೂನ್ ಜೀರಿಗೆ
  6. 1/4 ಟೀಸ್ಪೂನ್ ಸಾಸಿವೆ
  7. 10 -12 ಮೆಂತ್ಯ 
  8. 5 - 6 ಕಾಳುಮೆಣಸು (ಬೇಕಾದಲ್ಲಿ)
  9. 1/4 ಟೀಸ್ಪೂನ್ ಇಂಗು
  10. 1 ಟೀಸ್ಪೂನ್ ಅಡುಗೆ ಎಣ್ಣೆ

ಒಗ್ಗರಣೆಗೆ ಬೇಕಾಗುವ ಪದಾರ್ಥಗಳು:

  1. 1 ಕೆಂಪು ಮೆಣಸಿನಕಾಯಿ
  2. 5 - 6 ಕರಿಬೇವಿನ ಎಲೆ
  3. 1/4 ಟೀಸ್ಪೂನ್ ಸಾಸಿವೆ
  4. 2 ಟೀಸ್ಪೂನ್ ಅಡುಗೆ ಎಣ್ಣೆ
  5. ಒಂದು ಈರುಳ್ಳಿ ಸಣ್ಣಗೆ ಹೆಚ್ಚಿದ್ದು (ಬೇಕಾದಲ್ಲಿ)
  6. 5 - 6 ಬೇಳೆ ಬೆಳ್ಳುಳ್ಳಿ  (ಬೇಕಾದಲ್ಲಿ)

ಬೆರಕೆ ಸೊಪ್ಪು ಸಾಂಬಾರ್ ಮಾಡುವ ವಿಧಾನ:

  1. ಸೊಪ್ಪುಗಳನ್ನು ಆಯ್ದು, ತೊಳೆದು, ಕತ್ತರಿಸಿ.
  2. ಒಂದು ಕುಕ್ಕರ್ ನಲ್ಲಿ ತೊಗರಿಬೇಳೆಯನ್ನು ತೊಳೆಯಿರಿ. ಅರಿಶಿನ ಪುಡಿ, ಒಂದೆರಡು ಹನಿ ಎಣ್ಣೆ ಮತ್ತು ಅಗತ್ಯವಿದ್ದಷ್ಟು ನೀರು ಸೇರಿಸಿ. ಬೇಳೆಯನ್ನು ಮೆತ್ತಗೆ ಬೇಯಿಸಿ. 
  3. ನಂತ್ರ ಅದಕ್ಕೆ ಕತ್ತರಿಸಿದ ಸೊಪ್ಪು, ಉಪ್ಪು ಮತ್ತು ಟೊಮೇಟೊ ಹಾಕಿ. 
  4.  ಅಗತ್ಯವಿದ್ದಷ್ಟು ನೀರು ಸೇರಿಸಿ ಸೊಪ್ಪು ಮೆತ್ತಗಾಗುವವರೆಗೆ ಬೇಯಿಸಿ. 
  5. ಈಗ ಒಂದು ಬಾಣಲೆ ತೆಗೆದು ಕೊಂಡು, ಕೆಂಪು ಮೆಣಸಿನಕಾಯಿ, ಉದ್ದಿನಬೇಳೆ, ಕೊತ್ತಂಬರಿ ಬೀಜ, ಸಾಸಿವೆ, ಜೀರಿಗೆ, ಮೆಂತೆ ಮತ್ತು ಇಂಗನ್ನು ಮಧ್ಯಮ ಉರಿಯಲ್ಲಿ 1 ಟೀಸ್ಪೂನ್ ಎಣ್ಣೆ ಹಾಕಿ ಹುರಿಯಿರಿ.
  6. ಉದ್ದಿನಬೇಳೆ ಹೊಂಬಣ್ಣಕ್ಕೆ ತಿರುಗಿದ ಕೂಡಲೇ ಸ್ಟವ್ ಆಫ್ ಮಾಡಿ. 
  7. ಹುರಿದ ಮಸಾಲೆ ಮತ್ತು ತೆಂಗಿನತುರಿಯನ್ನು ಅಗತ್ಯವಿದ್ದಷ್ಟು ನೀರು ಸೇರಿಸಿ ಅರೆಯಿರಿ. 
  8. ಅರೆದ ಮಸಾಲೆಯನ್ನು ಬೇಯಿಸಿದ ಸೊಪ್ಪು+ಬೇಳೆ+ಟೊಮೇಟೊ ಇರುವ ಕುಕ್ಕರ್ ಗೆ ಹಾಕಿ. 
  9. ಉಪ್ಪು, ಬೆಲ್ಲ ಮತ್ತು ಹುಣಿಸೆರಸ ಹಾಕಿ.
  10. ನಿಮಗೆ ಸಾಂಬಾರ್ ಎಷ್ಟು ದಪ್ಪ ಬೇಕೋ ಅಷ್ಟು ನೀರು ಸೇರಿಸಿ, ಮಗುಚಿ, ಕುದಿಸಿ. 
  11. ಕೆಂಪು ಮೆಣಸು, ಸಾಸಿವೆ, ಕರಿಬೇವಿನ ಒಗ್ಗರಣೆ ಕೊಡಿ. ಬೇಕಾದಲ್ಲಿ ಸಣ್ಣಗೆ ಕತ್ತರಿಸಿದ ಈರುಳ್ಳಿ ಅಥವಾ ಬೆಳ್ಳುಳ್ಳಿಯನ್ನು ಒಗ್ಗರಣೆಗೆ ಸೇರಿಸಬಹುದು. ಬಿಸಿ ಅನ್ನದೊಂದಿಗೆ ಬಡಿಸಿ.

ಮಂಗಳವಾರ, ಜನವರಿ 30, 2018

Sabakki paddu recipe in kannada | ಸಾಬಕ್ಕಿ ಪಡ್ದು ಮಾಡುವ ವಿಧಾನ

Sabakki paddu recipe in kannada

Sabakki paddu recipe in kannada | ಸಾಬಕ್ಕಿ ಪಡ್ದು ಮಾಡುವ ವಿಧಾನ 

ಬೇಕಾಗುವ ಪದಾರ್ಥಗಳು: ( ಅಳತೆ ಕಪ್ = 240 ಎಂಎಲ್ )

  1. 1/2 ಕಪ್ ಸಾಬಕ್ಕಿ
  2. 1/4 ಕಪ್ ಸಣ್ಣ ರವೆ
  3. 1 ಟೇಬಲ್ ಸ್ಪೂನ್ ಮೊಸರು (ಬೇಕಾದಲ್ಲಿ)
  4. 1 ಈರುಳ್ಳಿ ಸಣ್ಣಗೆ ಹೆಚ್ಚಿದ್ದು (ಬೇಕಾದಲ್ಲಿ)
  5. 1 - 2 ಹಸಿರು ಮೆಣಸಿನ ಕಾಯಿ ಸಣ್ಣಗೆ ಹೆಚ್ಚಿದ್ದು 
  6. 1 ಟೇಬಲ್ ಸ್ಪೂನ್ ಸಣ್ಣಗೆ ಹೆಚ್ಚಿದ ಕರಿಬೇವಿನ ಎಲೆ 
  7. 1 ಟೇಬಲ್ ಸ್ಪೂನ್ ಸಣ್ಣಗೆ ಹೆಚ್ಚಿದ ಕೊತ್ತಂಬರಿ ಸೊಪ್ಪು 
  8. 1 ಟೀಸ್ಪೂನ್ ಸಣ್ಣಗೆ ಹೆಚ್ಚಿದ ಶುಂಠಿ
  9. ಎಣ್ಣೆ ಪಡ್ಡು ಮಾಡಲು 
  10. ಉಪ್ಪು ರುಚಿಗೆ ತಕ್ಕಷ್ಟು.

ಸಾಬಕ್ಕಿ ಪಡ್ದು ಮಾಡುವ ವಿಧಾನ:

  1. ಸಾಬಕ್ಕಿಯನ್ನು 4 - 5 ಘಂಟೆಗಳ ಕಾಲ ನೀರಿನಲ್ಲಿ ನೆನೆಸಿಡಿ. ಅಥವಾ ಎರಡು ಬೆರಳುಗಳಿಂದ ಒತ್ತಿ ಪುಡಿಮಾಡಲು ಆಗುವಷ್ಟು ನೆನೆಸಬೇಕು. 
  2. ಈರುಳ್ಳಿ, ಹಸಿರು ಮೆಣಸಿನ ಕಾಯಿ, ಕರಿಬೇವಿನ ಎಲೆ, ಶುಂಠಿ ಮತ್ತು ಕೊತ್ತಂಬರಿ ಸೊಪ್ಪನ್ನು ಸಣ್ಣಗೆ ಹೆಚ್ಚಿಡಿ.
  3. ನೆನೆಸಿದ ಸಾಬಕ್ಕಿಯ ನೀರು ಬಗ್ಗಿಸಿ. ಒಂದು ಪಾತ್ರೆಯಲ್ಲಿ ತೆಗೆದುಕೊಳ್ಳಿ. 
  4. ಅದಕ್ಕೆ ರವೇ, ಉಪ್ಪು ಮತ್ತು ಮೊಸರು ಸೇರಿಸಿ. 
  5. ಚೆನ್ನಾಗಿ ಕೈಯಲ್ಲಿ ಹಿಸುಕಿ ಕಲಸಿ.
  6. ನಂತ್ರ ಸಣ್ಣಗೆ ಹೆಚ್ಚಿದ ಈರುಳ್ಳಿ, ಹಸಿರು ಮೆಣಸಿನ ಕಾಯಿ, ಕರಿಬೇವಿನ ಎಲೆ, ಶುಂಠಿ ಮತ್ತು ಕೊತ್ತಂಬರಿ ಸೊಪ್ಪನ್ನು ಸೇರಿಸಿ ಕಲಸಿ.
  7. ಪಡ್ಡು ತವಾವನ್ನು ಬಿಸಿಮಾಡಿ ಕೊಳ್ಳಿ. ಗುಳಿಗಳಿಗೆ ಸ್ವಲ್ಪ ಎಣ್ಣೆ ಹಾಕಿ.
  8. ಹಿಟ್ಟನ್ನು ಹಾಕಿ, ಮುಚ್ಚಳ ಮುಚ್ಚಿ. ಸಣ್ಣ-ಮಧ್ಯಮ ಉರಿಯಲ್ಲಿ ಬೇಯಿಸಿ. 
  9. ಸುಮಾರು ಒಂದು ನಿಮಿಷದ ನಂತರ ಮುಚ್ಚಳ ತೆರೆದು, ಮೇಲಿನಿಂದ ಎಣ್ಣೆ ಹಾಕಿ. 
  10. ಪಡ್ಡುವನ್ನು ತಿರುಗಿಸಿ ಹಾಕಿ.  ಇನ್ನೊಂದು ಬದಿಯೂ ಬೇಯಿಸಿ. ಬಿಸಿ ಅಥವಾ ತಣ್ಣಗೆ ಬಡಿಸಿ. 


ಗುರುವಾರ, ಜನವರಿ 25, 2018

Bellulli rice recipe in Kannada | ಬೆಳ್ಳುಳ್ಳಿ ರೈಸ್ ಮಾಡುವ ವಿಧಾನ

Bellulli rice recipe in Kannada

Bellulli rice recipe in Kannada | ಬೆಳ್ಳುಳ್ಳಿ ರೈಸ್ ಮಾಡುವ ವಿಧಾನ 

ಬೆಳ್ಳುಳ್ಳಿ ರೈಸ್ ವಿಡಿಯೋ

ಬೇಕಾಗುವ ಪದಾರ್ಥಗಳು: (ಅಳತೆ ಕಪ್ = 240 ಎಂ ಎಲ್)

  1. 1 ಕಪ್ ಅಕ್ಕಿ (ಸೋನಾ ಮಸೂರಿ)
  2. 1/4 ಕಪ್ ತೆಂಗಿನ ತುರಿ
  3. 1 ಮಧ್ಯಮ ಗಾತ್ರದ ಬೆಳ್ಳುಳ್ಳಿ
  4. 3 - 4 ಒಣ ಮೆಣಸಿನಕಾಯಿ
  5. 1/2 ಟೀಸ್ಪೂನ್ ಸಾಸಿವೆ
  6. 2 ಟೇಬಲ್ ಸ್ಪೂನ್ ಶೇಂಗಾ / ಕಡಲೆಕಾಯಿ
  7. 1 ಟೀಸ್ಪೂನ್ ಉದ್ದಿನ ಬೇಳೆ
  8. 1 ಟೀಸ್ಪೂನ್ ಕಡ್ಲೆಬೇಳೆ
  9. 1 ಟೇಬಲ್ ಸ್ಪೂನ್ ಗೋಡಂಬಿ
  10. 1 ಟೀಸ್ಪೂನ್ ಉಪ್ಪು (ಅಥವಾ ನಿಮ್ಮ ರುಚಿ ಪ್ರಕಾರ)
  11. 5 - 6 ಕರಿಬೇವಿನ ಎಲೆ
  12. 1/4 ಟೀಸ್ಪೂನ್ ಅರಿಶಿನ ಪುಡಿ
  13. 2 ಟೀಸ್ಪೂನ್ ನಿಂಬೆರಸ (ಬೇಕಾದಲ್ಲಿ)
  14. 4 ಟೇಬಲ್ ಸ್ಪೂನ್ ಅಡುಗೆ ಎಣ್ಣೆ

ಬೆಳ್ಳುಳ್ಳಿ ರೈಸ್ ಮಾಡುವ ವಿಧಾನ:

  1. ಒಂದು ಕುಕ್ಕರ್ ನಲ್ಲಿ ಅಕ್ಕಿ ತೊಳೆದು ಅನ್ನ ಮಾಡಿಟ್ಟುಕೊಳ್ಳಿ. ಅನ್ನ ಸ್ವಲ್ಪ ಉದುರುದುರಾಗಿರಲಿ. 
  2. ಬೆಳ್ಳುಳ್ಳಿ ಸಿಪ್ಪೆ ತೆಗೆದು ದೊಡ್ಡದಾಗಿ ಕತ್ತರಿಸಿಕೊಳ್ಳಿ. ಅದರಲ್ಲಿ ಸ್ವಲ್ಪ ಬೆಳ್ಳುಳ್ಳಿಯನ್ನು ಸಣ್ಣಗೆ ಕತ್ತರಿಸಿ. 
  3. ಒಂದು ಬಾಣಲೆಯಲ್ಲಿ ಒಂದು ಚಮಚ ಎಣ್ಣೆ ಬಿಸಿ ಮಾಡಿ, ಒಣ ಮೆಣಸನ್ನು ಹುರಿಯಿರಿ. 
  4. ಅದಕ್ಕೆ ದೊಡ್ಡದಾಗಿ ಕತ್ತರಿಸಿದ ಬೆಳ್ಳುಳ್ಳಿ ಹಾಕಿ ಹುರಿಯಿರಿ. ಗಮನಿಸಿ ಸ್ವಲ್ಪ ಹುರಿದರೆ ಸಾಕು. 
  5. ನಂತ್ರ ಅದಕ್ಕೆ ತೆಂಗಿನತುರಿ ಹಾಕಿ ಹುರಿಯಿರಿ. 
  6. ಬಿಸಿ ಆರಿದ ಮೇಲೆ ಮಿಕ್ಸಿಯಲ್ಲಿ ಪುಡಿಮಾಡಿಟ್ಟುಕೊಳ್ಳಿ. 
  7. ಆಮೇಲೆ ಒಂದು ಬಾಣಲೆಯಲ್ಲಿ ಎಣ್ಣೆ ಬಿಸಿಮಾಡಿ. ಮೊದಲಿಗೆ ಶೇಂಗಾ ಅಥವಾ ಕಡಲೆಕಾಯಿಯನ್ನು ಹಾಕಿ.
  8. ಕಡಲೆಕಾಯಿ ಸ್ವಲ್ಪ ಕಾದು ಸಿಡಿಯಲು ಪ್ರಾರಂಭಿಸಿದ ಕೂಡಲೇ ಸಾಸಿವೆ, ಕಡ್ಲೆಬೇಳೆ, ಉದ್ದಿನ ಬೇಳೆ ಮತ್ತು ಗೋಡಂಬಿಯನ್ನು ಸೇರಿಸಿ.
  9. ಸಾಸಿವೆ ಸಿಡಿದ ಕೂಡಲೇ ಸಣ್ಣಗೆ ಕತ್ತರಿಸಿದ ಬೆಳ್ಳುಳ್ಳಿ ಹಾಕಿ ಹುರಿಯಿರಿ. 
  10. ಮತ್ತು ಕರಿಬೇವು ಸೇರಿಸಿ ಹುರಿಯಿರಿ.
  11. ಅರೆದಿಟ್ಟ ಮಸಾಲೆ  ಮತ್ತು ಅರಿಶಿನ ಪುಡಿಸೇರಿಸಿ ಕಲಸಿ.  
  12. ರುಚಿಗೆ ತಕ್ಕಷ್ಟು ಉಪ್ಪು ಹಾಕಿ. ಸ್ಟೋವ್ ಆಫ್ ಮಾಡಿ.
  13. ನಂತರ ಬೇಯಿಸಿದ ಅನ್ನ ಸೇರಿಸಿ. 
  14. ಒಂದು ಚಪ್ಪಟೆಯಾದ ಸಟ್ಟುಗದಿಂದ ಕಲಸಿ.
  15. ಬೇಕಾದಲ್ಲಿ ನಿಂಬೆರಸ ಸೇರಿಸಬಹುದು. ಬಿಸಿ-ಬಿಸಿ ಯಾಗಿರುವಾಗಲೇ ಬಡಿಸಿ.

To see step by step pictures click here (ಹಂತ ಹಂತವಾದ ಚಿತ್ರ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ)
Related Posts Plugin for WordPress, Blogger...